ಬುಧವಾರ, ಏಪ್ರಿಲ್ 14, 2021
24 °C

ಕಾಂಗ್ರೆಸ್ ಧ್ವನಿ ಎತ್ತಿರುವುದು ಸಂತ್ರಸ್ತೆಗಾಗಿಯಲ್ಲ, ಸಿದ್ದರಾಮಯ್ಯಗಾಗಿ: ಬಿಜೆಪಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆಗಾಗಿ ಅಲ್ಲ, ಬದಲಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಾಗಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕಾಂಗ್ರೆಸ್ ನಡೆಯನ್ನು ಟೀಕಿಸಿ ಬಿಜೆಪಿಯ ರಾಜ್ಯ ಘಟಕದ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಮಾಜಿ ಅಬಕಾರಿ ಸಚಿವ ಎಚ್‌.ವೈ.ಮೇಟಿ ಪ್ರಕರಣವನ್ನು (2016 ರಲ್ಲಿ ಎಚ್‌.ವೈ.ಮೇಟಿ ವಿರುದ್ಧ ಅತ್ಯಾಚಾರ ಆರೋಪ ಬಂದಿತ್ತು) ಉಲ್ಲೇಖಿಸಲಾಗಿದೆ.

ಓದಿ: 

‘ಮೇಟಿ ಪ್ರಕರಣದಲ್ಲಿ ಸಂತ್ರಸ್ತೆ ಪ್ರಕರಣ ದಾಖಲಿಸಿದ್ದರೂ ಎಫ್‌ಐಆರ್ ಕೂಡಾ ದಾಖಲಿಸಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ. ಈಗ ಕರ್ನಾಟಕ ಕಾಂಗ್ರೆಸ್ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆಗಾಗಿ ಅಲ್ಲ, ಸಿದ್ದರಾಮಯ್ಯ ಅವರಿಗಾಗಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಿಕ್ಕಿಸಿಹಾಕಲು ಸಿದ್ದರಾಮಯ್ಯ ಅವರು ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು