ಮಂಗಳವಾರ, ಜನವರಿ 31, 2023
27 °C
ಪೇಸಿಎಂ ಅಭಿಯಾನಕ್ಕೆ ಬಿಜೆಪಿ ತಿರುಗೇಟು?

ಚಿತ್ರದುರ್ಗ: ಸಿದ್ದರಾಮಯ್ಯ ವಿರುದ್ಧ ‘ಪಿಎಫ್‌ಐ ಭಾಗ್ಯ’ ಪೋಸ್ಟರ್ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ‘ಸಿದ್ರಾಮುಲ್ಲಾನ ಉಗ್ರಭಾಗ್ಯ ಹಾಗೂ ಲೀಲೆಗಳನ್ನು ತಿಳಿಯಲು ಸ್ಕ್ಯಾನ್ ಮಾಡಿ ಎಂಬ ಕ್ಯೂ ಆರ್ ಕೋಡ್ ಹೊಂದಿದ ಪೋಸ್ಟರ್ ಅನ್ನು ಚಳ್ಳಕೆರೆ ನಗರದ ವಿವಿಧೆಡೆ ಅಂಟಿಸಲಾಗಿದೆ. ಸಿದ್ದರಾಮಯ್ಯ ಅವರ ಭಾವಚಿತ್ರದೊಂದಿಗೆ ‘ಪಿಎಫ್‌ಐ ಭಾಗ್ಯ’ ಎಂದು ಉಲ್ಲೇಖ ಮಾಡಲಾಗಿದೆ.

ಭಾರತ್ ಜೋಡೊ ಯಾತ್ರೆ ಸಾಗುವ ಮಾರ್ಗದಲ್ಲಿ ಉದ್ದಕ್ಕೂ ಈ ಪೋಸ್ಟರ್ ಗಳು ರಾರಾಜಿಸುತ್ತಿವೆ. ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್ ಪೇಟ ಧರಿಸಿ ಕೈಯಲ್ಲಿ ಖಡ್ಗ ಹಿಡಿದ ಚಿತ್ರ ಪೋಸ್ಟರ್ ಗಳಲ್ಲಿದೆ.

ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯ ಪ್ರಚಾರಕ್ಕೆ ಅಳವಡಿಸಿದ ಫ್ಲೆಕ್ಸ್, ಬ್ಯಾನರ್ ಅಡಿಯಲ್ಲಿ ಈ ಪೋಸ್ಟರ್‌ಗಳು ಕಾಣಿಸಿಕೊಂಡಿವೆ. ಸೋಮವಾರ ರಾತ್ರಿ ಇವುಗಳನ್ನು ಅಂಟಿಸಿರುವ ಸಾಧ್ಯತೆ ಇದೆ. ಪೇಸಿಎಂ ಪೋಸ್ಟರ್‌ಗೆ ಪ್ರತಿಯಾಗಿ ಬಿಜೆಪಿ ಈ ಪೋಸ್ಟರ್ ಅಭಿಯಾನ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಓದಿ... 

ಇಂದಿನಿಂದ ಬಿಜೆಪಿ ‘ಜನಸಂಕಲ್ಪ ಯಾತ್ರೆ’: ಸಮಾವೇಶಗಳ ಪೂರ್ಣ ವಿವರ ಇಲ್ಲಿದೆ

ಚಿತ್ರದುರ್ಗದಲ್ಲಿ ಬಿಡುವು ನೀಡಿದ ಮಳೆ: ಭಾರತ್ ಜೋಡೊ ಪಾದಯಾತ್ರೆ ಆರಂಭ 

ಮುಲಾಯಂ ಅಂತ್ಯಕ್ರಿಯೆಗೆ ರಾಹುಲ್ ಗಾಂಧಿ ತೆರಳುವುದಿಲ್ಲ: ಡಿ.ಕೆ.ಶಿವಕುಮಾರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು