ಶನಿವಾರ, ಜೂನ್ 12, 2021
24 °C

ಆಮ್ಲಜನಕ ಎಕ್ಸ್‌ಪ್ರೆಸ್ ಮೂಲಕ 13 ರಾಜ್ಯಗಳಿಗೆ ದ್ರವ ಆಮ್ಲಜನಕ

ಪ್ರಜಾವಾಣಿ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ದೇಶದಲ್ಲಿ ಕೋವಿಡ್ ರೋಗಿಗಳಿಗೆ ನೆರವಾಗಲು ವೈದ್ಯಕೀಯ ಆಮ್ಲಜನಕವನ್ನು ಕ್ಷಿಪ್ರವಾಗಿ ತಲುಪಿಸಲು ಅನುಕೂಲವಾಗುವಂತೆ ರೈಲ್ವೆ ಇಲಾಖೆ ಸಹಯೋಗದಲ್ಲಿ ಆಮ್ಲಜನಕ ಎಕ್ಸ್‌ಪ್ರೆಸ್ ಸೇವೆ ಆರಂಭಿಸಿದೆ.

ಆಮ್ಲಜನಕ ಎಕ್ಸ್‌ಪ್ರೆಸ್ ರೈಲಿನ ಮೂಲಕ ಈವರೆಗೆ ದೇಶದ ವಿವಿಧೆಡೆಗೆ 9440 ಮೆಟ್ರಿಕ್‌ ಟನ್‌ ದ್ರವ ಆಮ್ಲಜನಕ ತಲುಪಿಸಲಾಗಿದೆ ಎಂದು ರಾಜ್ಯ ಬಿಜೆಪಿ ಹೇಳಿದೆ.

ಈ ಬಗ್ಗೆ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಇದುವರೆಗೆ 150 ಆಮ್ಲಜನಕ ಎಕ್ಸ್‌ಪ್ರೆಸ್ ರೈಲುಗಳು ತಮ್ಮ ಪ್ರಯಾಣ ಮುಗಿಸಿದೆ. ಆಮ್ಲಜನಕ ಎಕ್ಸ್‌ಪ್ರೆಸ್ ಮೂಲಕ ಪ್ರತಿನಿತ್ಯ 800 ಮೆಟ್ರಿಕ್ ಟನ್ ದ್ರವ ಆಮ್ಲಜನಕವನ್ನು ವಿವಿಧೆಡೆ ತಲುಪಿಸಲಾಗುತ್ತದೆ ಎಂದು ಹೇಳಿದೆ.

ಆಮ್ಲಜನಕ ಎಕ್ಸ್‌ಪ್ರೆಸ್ ಮೂಲಕ ಇದುವರೆಗೆ ಕರ್ನಾಟಕ ಸಹಿತ 13 ರಾಜ್ಯಗಳಿಗೆ ದ್ರವ ಆಮ್ಲಜನಕ ಸರಬರಾಜು ಮಾಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು