ಭಾನುವಾರ, ಜುಲೈ 3, 2022
27 °C

Karnataka Budget: ಮೇಕೆದಾಟು ಯೋಜನೆಗೆ ₹1,000 ಕೋಟಿ ಮೀಸಲು–ಬೊಮ್ಮಾಯಿ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಉದ್ದೇಶಿತ ಮೇಕೆದಾಟು ಯೋಜನೆ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳಿಗೆ ಬಜೆಟ್‌ನಲ್ಲಿ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ 2022–23 ನೇ ಸಾಲಿನ ಬಜೆಟ್ ಭಾಷಣದಲ್ಲಿ ಅವರು ಈ ವಿಷಯ ತಿಳಿಸಿದರು.

ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ತೋರಿಸಿದ ನಂತರ ಯೋಜನೆ ಆರಂಭಿಸಲು ಬಜೆಟ್‌ನಲ್ಲಿ ₹1,000 ಕೋಟಿ ತೆಗೆದಿರಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಹಂತ 3ಕ್ಕೆ ₹5000 ಕೋಟಿ ನೀಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಕಳಸಾ ಬಂಡೂರಿಗಾಗಿ ₹1000 ಕೋಟಿ ತೆಗೆದಿಡಲಾಗುವುದು ಎಂದು ಸಿಎಂ ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗಾಗಿ ₹3000 ಕೋಟಿ ನೀಡಲಾಗುವುದು ಎಂದು ಸಿಎಂ ಹೇಳಿದರು.

ಎತ್ತಿನಹೊಳಿ ಯೋಜನೆಗಾಗಿ ₹3000 ಕೋಟಿ ಕೊಡಲಾಗುವುದು ಎಂದು ಬೊಮ್ಮಾಯಿ ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು