ರಾಜ್ಯದಲ್ಲಿ 'ಯಶಸ್ವಿನಿ' ಆರೋಗ್ಯ ಸೇವೆ ಮರು ಜಾರಿ: ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಸ್ಥಗಿತಗೊಳಿಸಲಾಗಿದ್ದ 'ಯಶಸ್ವಿನಿ' ಆರೋಗ್ಯ ಸೇವೆಯನ್ನು ಮರು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬಜೆಟ್ ಭಾಷಣದಲ್ಲಿ ಘೋಷಿಸಿದರು.
ಯಶಸ್ವಿನಿ ಯೋಜನೆ ಮರು ಜಾರಿಗೆ ರೈತರು ಹಲವು ದಿನಗಳಿಂದ ಬೇಡಿಕೆ ಇಟ್ಟಿದ್ದು, ಆ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಲು ಸರ್ಕಾರವು ನಿರ್ಧರಿಸಿದೆ.
ಈ ಯೋಜನೆಯಿಂದಾಗಿ ಗ್ರಾಮೀಣ ಭಾಗದ ರೈತ ಕುಟುಂಬಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳು ಸಿಗಲು ಸಹಕಾರಿಯಾಗಲಿದೆ. ಈ ಯೋಜನೆಗಾಗಿ ಸರ್ಕಾರವು ₹300 ಕೋಟಿ ಒದಗಿಸಲಿದೆ.
ಇದನ್ನೂ ಓದಿ– Karnataka Budget 2022: ಬೆಂಗಳೂರಿಗೆ ಏನೇನು?
ಇದರೊಂದಿಗೆ ರಾಜ್ಯದಲ್ಲಿ ನಡೆಯುತ್ತಿರುವ ಸಹಕಾರಿ ವಲಯದ ಆಸ್ಪತ್ರೆಗಳನ್ನು ಬಲಪಡಿಸಲು ವಿಶೇಷ ನೆರವು ನೀಡುವುದಾಗಿ ಘೋಷಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.