ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಈ ಸಾಲಿನಲ್ಲಿ ₹5,000 ಕೋಟಿ ಮೌಲ್ಯದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ.
‘ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ 2021-22ರಲ್ಲಿ ₹1,500 ಕೋಟಿ ಒದಗಿಸಲಾಗಿದ್ದು, ಹಿಂದಿನ ಆಯವ್ಯಯದಲ್ಲಿ ನಮ್ಮ ಸರ್ಕಾರ ₹3,000 ಕೋಟಿಗೆ ಹೆಚ್ಚಿಸಿದೆ. ಈ ಅನುದಾನದಲ್ಲಿ 3,155 ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ. ಪ್ರಾದೇಶಿಕ ಅಸಮತೋಲನೆಯನ್ನು ಸರಿಪಡಿಸುವ ಉದ್ದೇಶದಿಂದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ವತಿಯಿಂದ ಪ್ರಸಕ್ತ ಸಾಲಿನಲ್ಲಿ ₹5,000 ಕೋಟಿ ಮೌಲ್ಯದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು’ ಎಂದು ಅವರು ಹೇಳಿದರು.
ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ (2019) ಹೈದರಾಬಾದ್–ಕರ್ನಾಟಕ ವಿಮೋಚನಾ ಹೋರಾಟ ದಿನವನ್ನು (ಸೆ. 17) ಕಲ್ಯಾಣ ಕರ್ನಾಟಕ ಉತ್ಸವ ದಿನ ಎಂದು ಬದಲಾಯಿಸಿದರು.
ಕಳೆದ ಕಲ್ಯಾಣ ಕರ್ನಾಟಕ ಉತ್ಸವ ದಿನದಲ್ಲಿ ಮಾತನಾಡಿದ್ದ ಬಸವರಾಜ ಬೊಮ್ಮಾಯಿ ಅವರು, ಮುಂದಿನ ಬಜೆಟ್‌ನಲ್ಲಿ ಕೆಕೆಆರ್‌ಡಿಬಿಗೆ ನೀಡುತ್ತಿರುವ ಅನುದಾನವನ್ನು ₹3 ಸಾವಿರದಿಂದ ₹5 ಸಾವಿರ ಕೋಟಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದ್ದರು. ಈ ಘೋಷಣೆಯನ್ನು ಬಜೆಟ್‌ನಲ್ಲಿ ಈಡೇರಿಸಿದ್ದಾರೆ.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.