ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Budget 2023: ನೀರಾವರಿ ಕ್ಷೇತ್ರಕ್ಕೆ ₹25,000 ಕೋಟಿ ಅನುದಾನ

Last Updated 17 ಫೆಬ್ರುವರಿ 2023, 11:16 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ನೀರಾವರಿ ಕ್ಷೇತ್ರಕ್ಕೆ ಒಟ್ಟಾರೆ ₹25,000 ಕೋಟಿ ಅನುದಾನ ಘೋಷಿಸಿದ್ದಾರೆ.

ಇಲ್ಲಿದೆ ಮಾಹಿತಿ:

*ಯಾದಗಿರಿ ಮತ್ತು ಕಲಬುರಗಿಯಲ್ಲಿ ₹443 ಕೋಟಿ ವೆಚ್ಚದಲ್ಲಿ 138 ಮೇಲ್ಮೈ ಸಣ್ಣ ನೀರಾವರಿ ಕಾಮಗಾರಿ ಕೈಗೊಳ್ಳಲು ಕ್ರಮ.

*ಪಶ್ಚಿಮ ವಾಹಿನಿ 2 ಹಂತದ ಯೋಜನೆಯ ಕಾಮಗಾರಿಗಳ ಅನುಷ್ಠಾನಕ್ಕೆ ₹378 ಕೋಟಿ

*ಕೃಷ್ಣಾ ಮೇಲ್ದಂಡೆ ಹಂತ 3ರ ಯೋಜನೆಗೆ ₹5,000 ಕೋಟಿ ಅನುದಾನ

* ₹11,236 ಕೋಟಿ ಅಂದಾಜು ವೆಚ್ಚದ 38 ಯೋಜನೆಗಳ ಅನುಷ್ಠಾನ; 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಸೃಜನೆಯ ಗುರಿ,

*ಪ್ರಗತಿಯಲ್ಲಿರುವ ಕೆರೆ ತುಂಬಿಸುವ ಯೋಜನೆಗಳು, ಸಸಾಲಟ್ಟಿ ಶಿವಲಿಂಗೇಶ್ವರ, ಮಂಟೂರು ಮಹಾಲಕ್ಷ್ಮೀ ಮತ್ತು ಶ್ರೀ ವೆಂಕಟೇಶ್ವರ ಏತ ನೀರಾವರಿ ಯೋಜನೆಗಳು ಮತ್ತು ಮಳವಳ್ಳಿ ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ.

*ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ ₹1,000 ಕೋಟಿ ಅನುದಾನ.

*ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ₹5,300 ಕೋಟಿ ಅನುದಾನ.

ಇದನ್ನೂ ಓದಿ:














ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT