ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಬಜೆಟ್‌ನಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕ್ರಮಗಳಿವೆ: ಯಡಿಯೂರಪ್ಪ 

Last Updated 17 ಫೆಬ್ರುವರಿ 2023, 9:10 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಎರಡನೇ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ.

‘ಅತ್ಯುತ್ತಮವಾದ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು’ ಎಂದು ಶಾಸಕ ಬಿ.ಎಸ್‌.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

‘ರಾಜ್ಯದ ಆರ್ಥಿಕ ಸ್ಥಿತಿಯ ಉತ್ತಮ ನಿರ್ವಹಣೆಯ ಜೊತೆಗೆ ದೀರ್ಘಕಾಲಿನ ಅಭಿವೃದ್ಧಿಯ ದೂರದೃಷ್ಟಿಯೊಂದಿಗೆ ಇಂದು ಪಕ್ಷದ ಆಶಯದಂತೆ, ರೈತರ ಆದಾಯ ದ್ವಿಗುಣಗೊಳಿಸುವ ಕ್ರಮಗಳಿಗೆ, ದುರ್ಬಲ ವರ್ಗ, ಮಹಿಳೆಯರ, ಯುವಜನರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದೆ’ ಎಂದು ಕೊಂಡಾಡಿದ್ದಾರೆ.

₹3.1ಲಕ್ಷ ಕೋಟಿ ಗಾತ್ರದ ಬಜೆಟ್​ನಲ್ಲಿ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ ₹80 ಸಾವಿರ ಕೋಟಿಗಿಂತ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ. ಬೆಂಗಳೂರು ನಗರದ ಅಭಿವೃದ್ಧಿಗೆ ₹10 ಸಾವಿರ ಕೋಟಿ ಸಮೀಪದಷ್ಟು ಅನುದಾನ ಕೊಡಲಾಗಿದೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT