ಯೋಗೇಶ್ವರ್‌ಗೆ ಸಚಿವ ಸ್ಥಾನ ಖಚಿತ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ‘ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರನ್ನು ನೂರಕ್ಕೆ ನೂರರಷ್ಟು ಮಂತ್ರಿ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
‘ಯೋಗೇಶ್ವರ್ ಪರ ಬ್ಯಾಟಿಂಗ್ ಮಾಡುವವರು ಸಚಿವ ಸ್ಥಾನ ತ್ಯಾಗ ಮಾಡಲಿ’ ಎಂದು ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿರುವ ಶಾಸಕ ರೇಣುಕಾಚಾರ್ಯ ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ‘ಯೋಗೇಶ್ವರ ಅವರನ್ನು ಸಚಿವ ಮಾಡುವುದು ಖಚಿತ’ ಎಂದರು.
ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮುಖ್ಯಮಂತ್ರಿ ಸುದ್ದಿಗಾರರ ಜೊತೆ ಮಾತನಾಡಿದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.