ಮಂಗಳವಾರ, ಸೆಪ್ಟೆಂಬರ್ 21, 2021
22 °C

ಸಂಪುಟ ರಚನೆ: ಸಂಭವನೀಯ ಸಚಿವರ ಪಟ್ಟಿಯೊಂದಿಗೆ ದೆಹಲಿಗೆ ಹೊರಟ ಸಿಎಂ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವರಿಷ್ಠರ ಜೊತೆ ಚರ್ಚಿಸಿ ಸಚಿವ ಸಂಪುಟ ರಚನೆ ಅಂತಿಮಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಸಂಜೆ ದಿಢೀರ್‌ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಸಂಭವನೀಯ ಸಚಿವರ ಪಟ್ಟಿಯನ್ನು ತಮ್ಮ ಜೊತೆ ತೆಗೆದುಕೊಂಡು ಹೊರಟಿರುವ ಮುಖ್ಯಮಂತ್ರಿ, ಹೈಕಮಾಂಡ್ ಒಪ್ಪಿಗೆ ಪಡೆದು ಸೋಮವಾರ ( ಆ. 2) ವಾಪಸಾಗಲಿದ್ದಾರೆ.

ಇದನ್ನೂ ಓದಿ: 

ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಭಾನುವಾರ ಸಂಜೆ ಮಾತನಾಡಿದ ಅವರು, ‘ಸಂಜೆ 5.40ರ ವಿಮಾನದಲ್ಲಿ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ( ಸೋಮವಾರ) ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುತ್ತೇನೆ. ಸಚಿವ ಸಂಪುಟ ಸೇರುವವರ ಪಟ್ಟಿಯನ್ನು ಅಂತಿಮಗೊಳಿಸಿ ಮರಳುತ್ತೇನೆ’ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು