ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಪುಟ ವಿಸ್ತರಣೆ, ಮುಖ್ಯಮಂತ್ರಿ ನಿರ್ಧಾರಕ್ಕೆ ಬದ್ಧ: ಮುರುಗೇಶ್ ನಿರಾಣಿ

Last Updated 29 ಜುಲೈ 2021, 8:40 IST
ಅಕ್ಷರ ಗಾತ್ರ

ಬೆಂಗಳೂರು: ‘ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಯ ಪರಮಾಧಿಕಾರ. ಮುಖ್ಯಮಂತ್ರಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾನು ಬದ್ಧ’ ಎಂದು ಶಾಸಕ ಮುರುಗೇಶ್ ನಿರಾಣಿ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಸಂಪುಟ ವಿಸ್ತರಣೆ ಯಾವಾಗ ಮಾಡಬೇಕು, ಯಾರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬುದು ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು, ಅವರ ನಿರ್ಧಾರಕ್ಕೆ ನಾವೆಲ್ಲರೂ ಬದ್ದರಾಗಿರಬೇಕು’ ಎಂದರು.

‘ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಬೊಮ್ಮಾಯಿ ಅತ್ಯುತ್ತಮ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ರೈತರು, ಹಿರಿಯರು, ವಿಧವೆಯರು, ಅಂಗವಿಕಲರಿಗೆ ಆದ್ಯತೆ ನೀಡುವ ನಿರ್ಣಯಗಳನ್ನು ಕೈಗೊಂಡಿರುವುದು ಉತ್ತಮ ನಿರ್ಧಾರ’ ಎಂದು ಹೊಗಳಿದರು.

‘ಬೊಮ್ಮಾಯಿ ಅವರ ನಡೆ ಉತ್ತಮವಾಗಿ ಮುಂದುವರೆದಿದೆ. ಆಡಳಿತದ ದಿಕ್ಸೂಚಿ ಏನಿರಲಿದೆ ಎಂಬುದನ್ನು ಮೊದಲ ದಿನವೇ ತೋರಿಸಿಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಆಡಳಿತಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಲಿದೆ’ ಎಂದರು.

ಸಚಿವ ಸಂಪುಟಕ್ಕೆ ಸೇರದಿರಲು ತೀರ್ಮಾನಿಸಿರುವ ಜಗದೀಶ ಶೆಟ್ಟರ್ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ನಿರಾಣಿ, ‘ಶೆಟ್ಟರ್ ಪಕ್ಷದಲ್ಲಿ ಅತ್ಯಂತ ಹಿರಿಯರು. ಮುಖ್ಯಮಂತ್ರಿ, ಸಭಾಧ್ಯಕ್ಷ, ರಾಜ್ಯ ಘಟಕದ ಅಧ್ಯಕ್ಷ ಆಗಿದ್ದವರು. ಅವರು ಯಾವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ’ ಎಂದರು.

‘ಯಾರು ಯಾವ ನಿರ್ಧಾರವನ್ನು ಕೈಗೊಳ್ಳುತ್ತಾರೊ ನನಗೆ ಗೊತ್ತಿಲ್ಲ. ಶೆಟ್ಟರ್ ಅವರದು ವೈಯಕ್ತಿಕ ವಿಚಾರ. ಈ ಬಗ್ಗೆ ನಾನು ಯಾವುದೇ ಗೊಂದಲ ಸೃಷ್ಟಿಸಲು ಇಚ್ಚಿಸುವುದಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT