ಶನಿವಾರ, ಮಾರ್ಚ್ 25, 2023
28 °C

ರಾಜಭವನದಿಂದ ಬಿಡುಗಡೆಯಾಗಲಿದೆ ಸಚಿವರ ಅಧಿಕೃತ ಪಟ್ಟಿ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜಭವನ-ಸಂಗ್ರಹ ಚಿತ್ರ

ಬೆಂಗಳೂರು: ನೂತನ ಸಚಿವರ ಪಟ್ಟಿ ಬೆಳಿಗ್ಗೆ 11ರಿಂದ 11.30ರ ಮಧ್ಯೆ ರಾಜಭವನದಿಂದ ಅಧಿಕೃತವಾಗಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಬೆಳಿಗ್ಗೆ ದೆಹಲಿಯಿಂದ ಮರಳಿದ ಬೊಮ್ಮಾಯಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ರಾಜಭವನನದ ಗಾಜಿನ ಮನೆಯಲ್ಲಿ ಮಧ್ಯಾಹ್ನ 2.15ಕ್ಕೆ ಪ್ರಮಾಣ ವಚನ ನಡೆಯಲಿದೆ ಎಂದೂ ಅವರು ಹೇಳಿದರು.

ಇದನ್ನೂ ಓದಿ: ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ; ಇವತ್ತೇ ನೂತನ ಸಚಿವರ ಪ್ರಮಾಣ | Prajavani

ಕರ್ನಾಟಕದ ರಾಜ್ಯಪಾಲರಾದ ಥಾಮರ್‌ಚಂದ್ ಗೆಹಲೋತ್‌ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಹೂವಿನ ಬೊಕ್ಕೆಗಳನ್ನು ತರದಂತೆ ಆಹ್ವಾನ ಪತ್ರಿಕೆಯಲ್ಲಿ ಸೂಚನೆ ನೀಡಲಾಗಿದೆ. ಇಂದು 25 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು