ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಸಂಪುಟ ಸಭೆ ಒಪ್ಪಿಗೆ

ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
2021ರ ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆಯನ್ನು ಸಿದ್ಧಪಡಿಸಲಾಗಿತ್ತು. ವಿಧಾನಸಭೆಯ ಒಪ್ಪಿಗೆ ದೊರಕಿದ್ದ ಮಸೂದೆಯನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಈಗ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಸುಗ್ರೀವಾಜ್ಞೆ ರೂಪದಲ್ಲಿ ಮತಾಂತರ ನಿಷೇಧ ಮಸೂದೆ ಜಾರಿಗೆ ಬರಲಿದೆ. ವಿಧಾನಮಂಡಲದ ಮುಂಬರುವ ಅಧಿವೇಶನದಲ್ಲಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ಪಡೆಯಲಾಗುವುದು ಎಂದರು
ಇದನ್ನೂ ಓದಿ.. ಪರಿಷತ್ನ ನಾಲ್ಕು ಸ್ಥಾನಗಳ ಚುನಾವಣೆಗೆ ದಿನಾಂಕ ಘೋಷಣೆ: ಜೂನ್ 15ಕ್ಕೆ ಫಲಿತಾಂಶ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.