ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಸಂಪುಟ ಸಭೆ ಒಪ್ಪಿಗೆ: ಯು.ಟಿ.ಖಾದರ್‌ ಆಕ್ರೋಶ

ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಶಾಸಕ ಯು.ಟಿ.ಖಾದರ್‌, ಇದು ಸಂವಿಧಾನ ವಿರೋಧಿ ನಡೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ‘ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಅನುಮೋದನೆ ಬಾಕಿ ಇದೆ. ಯಾವುದೇ ಚರ್ಚೆ ನಡೆಸದೇ, ಏಕಾಏಕಿ ಸುಗ್ರೀವಾಜ್ಞೆಹೊರಡಿಸುವ ಮೂಲಕ ಕಾಯ್ದೆಯನ್ನು ಜಾರಿ ತರುವ ತುರ್ತು ಮತ್ತು ಅನಿವಾರ್ಯತೆ ಸರ್ಕಾರಕ್ಕೆ ಏನಿತ್ತು’ ಎಂದು ಪ್ರಶ್ನಿಸಿದ್ದಾರೆ.

‘ಸಂವಿಧಾನ ವಿರೋಧಿ ಹಾಗೂ ಸರ್ಕಾರದ ಹಿಂಬಾಗಿಲ ಕೃತ್ಯವನ್ನು ಘನವೆತ್ತ ರಾಜ್ಯಪಾಲರು ತಿರಸ್ಕರಿಸಬೇಕು. ವಿಧಾನ ಮಂಡಲದ ಗೌರವವನ್ನ ಉಳಿಸಬೇಕೆಂದು ಜನತೆಯ ಪರವಾಗಿ ಮನವಿ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT