ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಸಚಿವರ ಖಾತೆಗಳ ಪಟ್ಟಿ ಇಲ್ಲಿದೆ: ಸಿಎಂಗೆ ಹಣಕಾಸು, ಆರಗ ಜ್ಞಾನೇಂದ್ರಗೆ ಗೃಹ

Last Updated 7 ಆಗಸ್ಟ್ 2021, 6:34 IST
ಅಕ್ಷರ ಗಾತ್ರ

ಬೆಂಗಳೂರು:ಬಸವರಾಜ ಬೊಮ್ಮಾಯಿ ಸರ್ಕಾರದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದರೆ,ಆರಗ ಜ್ಞಾನೇಂದ್ರ ಅವರಿಗೆ ಮಹತ್ವದ ಗೃಹ ಖಾತೆ ನೀಡಲಾಗಿದೆ.

ಬಿ.ಸಿ.ನಾಗೇಶಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನೀಡಲಾಗಿದೆ.ಮುರುಗೇಶ ನಿರಾಣಿಗೆಬೃಹತ್ ಕೈಗಾರಿಕೆ ನೀಡಲಾಗಿದ್ದರೆ, ಸಿಸಿ ಪಾಟೀಲ ಅವರಿಗೆ ಲೋಕೋಪಯೋಗಿ ಇಲಾಖೆ ಕೊಡಲಾಗಿದೆ.

ಸಚಿವರು ಮತ್ತು ಅವರ ಖಾತೆ ವಿವರ

– ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ- ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಹಣಕಾಸು, ಬೆಂಗಳೂರು ಅಭಿವೃದ್ಧಿ

– ಗೋವಿಂದ ಕಾರಜೋಳ- ಜಲ ಸಂಪನ್ಮೂಲ

– ಕೆ.ಎಸ್. ಈಶ್ವರಪ್ಪ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

– ಬಿ. ಶ್ರೀರಾಮುಲು- ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ

– ವಿ. ಸೋಮಣ್ಣ- ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ

– ಉಮೇಶ್ ವಿ. ಕತ್ತಿ- ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ

– ಎಸ್. ಅಂಗಾರ- ಮೀನುಗಾರಿಕೆ, ಬಂದರು

– ಜೆ.ಸಿ. ಮಾಧುಸ್ವಾಮಿ- ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರ

– ಆರಗ ಜ್ಞಾನೇಂದ್ರ- ಗೃಹ

– ಡಾ.ಸಿ.ಎನ್. ಅಶ್ವತ್ಥನಾರಾಯಣ- ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಕೌಶಲ ಅಭಿವೃದ್ಧಿ

– ಸಿ.ಸಿ. ಪಾಟೀಲ- ಲೋಕೋಪಯೋಗಿ

– ಆನಂದ್ ಸಿಂಗ್- ಪರಿಸರ ಮತ್ತು ಪ್ರವಾಸೋದ್ಯಮ

– ಕೋಟ ಶ್ರೀನಿವಾಸ ಪೂಜಾರಿ- ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಅಭಿವೃದ್ಧಿ

– ಮುರುಗೇಶ್ ಆರ್.‌ನಿರಾಣಿ- ಬೃಹತ್ ಮತ್ತು ಮಧ್ಯಮ ಕೈಗಾರಿಕೆ

– ಅರಬೈಲ್ ಶಿವರಾಂ ಹೆಬ್ಬಾರ್- ಕಾರ್ಮಿಕ

– ಎಸ್.ಟಿ. ಸೋಮಶೇಖರ್- ಸಹಕಾರ

– ಬಿ.ಸಿ. ಪಾಟೀಲ- ಕೃಷಿ

– ಬೈರತಿ ಬಸವರಾಜ- ನಗರಾಭಿವೃದ್ಧಿ

– ಡಾ.ಕೆ. ಸುಧಾಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ

– ಕೆ. ಗೋಪಾಲಯ್ಯ- ಅಬಕಾರಿ

– ಶಶಿಕಲಾ ಜೊಲ್ಲೆ- ಮುಜರಾಯಿ, ಹಜ್ ಮತ್ತು ವಕ್ಫ್

– ಎಂ.ಟಿ.ಬಿ. ನಾಗರಾಜು- ಪೌರಾಡಳಿತ, ಸಣ್ಣ ಕೈಗಾರಿಕೆ

– ಕೆ.ಸಿ. ನಾರಾಯಣ ಗೌಡ- ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡೆ

– ಬಿ.ಸಿ. ನಾಗೇಶ್- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

– ವಿ. ಸುನೀಲ್ ಕುಮಾರ್- ಇಂಧನ, ಕನ್ನಡ ಮತ್ತು ಸಂಸ್ಕೃತಿ

– ಹಾಲಪ್ಪ ಆಚಾರ್- ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ

– ಶಂಕರ ಪಾಟೀಲ್ ಬಿ. ಮುನೇನಕೊಪ್ಪ- ಕೈಮಗ್ಗ, ಜವಳಿ, ಸಕ್ಕರೆ

– ಮುನಿರತ್ನ- ತೋಟಗಾರಿಕೆ, ಯೋಜನೆ ಮತ್ತು ಸಾಂಖ್ಯಿಕ

ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿದ್ದ ಕೆಲವರ ಖಾತೆ ಬದಲು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಇದ್ದ ಗೃಹ ಖಾತೆಯನ್ನು ಆರಗ ಜ್ಞಾನೇಂದ್ರ ಅವರಿಗೆ ನೀಡಲಾಗಿದೆ. ಗೋವಿಂದ ಕಾರಜೋಳ ಅವರಿಗೆ ಲೋಕೋಪಯೋಗಿ ಬದಲಿಗೆ ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಲೋಕೋಪಯೋಗಿ ಖಾತೆಯನ್ನು ಸಿ.ಸಿ. ಪಾಟೀಲ ಅವರಿಗೆ ನೀಡಲಾಗಿದೆ.

ಶಶಿಕಲಾ ಜೊಲ್ಲೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಬದಲಿಗೆ ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ. ಮುಜರಾಯಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT