ಬುಧವಾರ, ಸೆಪ್ಟೆಂಬರ್ 22, 2021
21 °C

ಸಚಿವ ಸಂಪುಟ: ಯಡಿಯೂರಪ್ಪ ಸಂಪುಟದಲ್ಲಿದ್ದ ಕೆಲವರ ಖಾತೆಗಳು ಬದಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಂಪುಟದಲ್ಲಿದ್ದ ಕೆಲವು ಸಚಿವರ ಖಾತೆಗಳನ್ನು ಬದಲಾಯಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಇದ್ದ ಗೃಹ ಖಾತೆಯನ್ನು ಆರಗ ಜ್ಞಾನೇಂದ್ರ ಅವರಿಗೆ ನೀಡಲಾಗಿದೆ. ಗೋವಿಂದ ಕಾರಜೋಳ ಅವರಿಗೆ ಲೋಕೋಪಯೋಗಿ ಬದಲಿಗೆ ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಲೋಕೋಪಯೋಗಿ ಖಾತೆಯನ್ನು ಸಿ.ಸಿ. ಪಾಟೀಲ ಅವರಿಗೆ ನೀಡಲಾಗಿದೆ.

ಶಶಿಕಲಾ ಜೊಲ್ಲೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಬದಲಿಗೆ ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ. ಮುಜರಾಯಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ.

ಇದನ್ನೂ ಓದಿ... ಹೊಸ ಸಚಿವರ ಖಾತೆಗಳ ಪಟ್ಟಿ ಇಲ್ಲಿದೆ: ಸಿಎಂಗೆ ಹಣಕಾಸು, ಆರಗ ಜ್ಞಾನೇಂದ್ರಗೆ ಗೃಹ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು