ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ. 1ರಿಂದ ಶಾಲೆ-ಕಾಲೇಜು ಆರಂಭಿಸುವ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ: ಬಿಎಸ್‌ವೈ

Last Updated 28 ಡಿಸೆಂಬರ್ 2020, 6:03 IST
ಅಕ್ಷರ ಗಾತ್ರ

ಬೆಂಗಳೂರು:'ಜನವರಿ 1ರಿಂದ ಶಾಲೆ- ಕಾಲೇಜು ಆರಂಭಿಸುವ ಕುರಿತು (ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ) ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಿದ್ದೇವೆ' ಎಂದುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸಚಿವ ಸಂಪುಟ ಸಭೆಗೂ ಮೊದಲು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆಸೋಮವಾರ ಮಾತನಾಡಿದ ಅವರು, 'ಜನವರಿ 1ರಿಂದ ಶಾಲೆ ಕಾಲೇಜು ಆರಂಭಿಸಲಾಗುವುದು. ಆದರೂ ಈ ಬಗ್ಗೆ ಚರ್ಚೆ ಮಾಡುತ್ತೇವೆ' ಎಂದರು.

ಬಿಜೆಪಿ ಬೆಂಬಲಿತರು ಗೆಲುವು: ಸಿಎಂ ವಿಶ್ವಾಸ

'ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುತ್ತಾರೆ. ಕಾಂಗ್ರೆಸ್‌ಗೆ ಉತ್ಸಾಹ ಇಲ್ಲ ಎಂಬುದು ಗೊತ್ತಾಗುತ್ತದೆ' ಎಂದೂ ಮುಖ್ಯಮಂತ್ರಿ ಹೇಳಿದರು.

'ಅಧಿಕಾರ ವಿಕೇಂದ್ರೀಕರಣ ಸಂದರ್ಭದಲ್ಲಿ ಹಲವು ವಿದ್ಯಾವಂತರು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಶೇ 95ರಷ್ಟು ಸ್ಥಾನ ಗಳಲ್ಲಿ ಗೆಲ್ಲೋದು ನೂರಕ್ಕೆ ನೂರು ನಿಶ್ಚಿತ. ಚುನಾವಣೆಯಲ್ಲಿ ಕಾಂಗ್ರೆಸ್ ನ ಯಾವುದೇ ನಾಯಕರು ಆಸಕ್ತಿ ವಹಿಸಿರಲಿಲ್ಲ. ಮುಂದೆ ಗ್ರಾಮ ಪಂಚಾಯ್ತಿಗೆ ಆಯ್ಕೆಯಾಗುವ ಸದಸ್ಯರಿಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡ್ತೇವೆ. ಗ್ರಾಮಗಳ ಅಭಿವೃದ್ಧಿ ಮಾಡಲು ಸದಸ್ಯರಿಗೆ ಸಹಕಾರ ಕೊಡಲು ಪ್ರಾಮಾಣಿಕ ಕೆಲಸ ಮಾಡುತ್ತೇವೆ' ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT