ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LIVE– ಬಿಎಸ್‌ವೈ ರಾಜೀನಾಮೆ | ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್‌
LIVE

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಚರ್ಚೆಯನ್ನು ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಅಧಿಕೃತಗೊಳಿಸಿದೆ. ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ ಘೋಷಣೆಯೊಂದಿಗೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತೆ ಚುರುಕುಗೊಂಡಿದೆ. ರಾಜ್ಯ ರಾಜಕೀಯದ ಇಂದಿನ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯ.
Last Updated 26 ಜುಲೈ 2021, 13:20 IST
ಅಕ್ಷರ ಗಾತ್ರ
13:1926 Jul 2021

ಬಿಎಸ್‌ವೈ ರಾಜೀನಾಮೆ ಹಿಂದೆ ನಳಿನ್ ಮತ್ತು ಸಿಟಿ ರವಿ ಕೈವಾಡವಿದೆ: ಕಾಂಗ್ರೆಸ್ ಆರೋಪ

11:4526 Jul 2021

ನೂತನ ಮುಖ್ಯಮಂತ್ರಿ ಆಯ್ಕೆ: ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್‌

ರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಇಬ್ಬರು ವೀಕ್ಷಕರನ್ನು ರಾಜ್ಯಕ್ಕೆ ಕಳುಹಿಸಲು ನಿರ್ಧರಿಸಿದೆ.

ಕೇಂದ್ರದ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

11:2726 Jul 2021

ದೆಹಲಿ ನಿರಂಕುಶಾಧಿಕಾರಕ್ಕೆ ಯಡಿಯೂರಪ್ಪ ತಲೆದಂಡ: ಕಾಂಗ್ರೆಸ್

11:0226 Jul 2021

ಭ್ರಷ್ಟಾಚಾರ, ವಯಸ್ಸಿನ ಕಾರಣಕ್ಕೆ ಯಡಿಯೂರಪ್ಪ ತೆಗೆದಿದ್ದಾರೆ: ಸಿದ್ದರಾಮಯ್ಯ

10:3526 Jul 2021

ಹೆಜ್ಜೆ ಹೆಜ್ಜೆಗೂ ಅಗ್ನಿಪರೀಕ್ಷೆ: ಭಾವುಕರಾಗಿ ಕಣ್ಣೀರು ಹಾಕಿದ ಯಡಿಯೂರಪ್ಪ

‘ಎರಡು ವರ್ಷವೂ ಹೆಜ್ಜೆ ಹೆಜ್ಜೆಗೂ ಅಗ್ನಿಪರೀಕ್ಷೆಗಳು ಎದುರಾಯಿತು. ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡರೂ ಸಂಪುಟ ವಿಸ್ತರಣೆಗೆ ವರಿಷ್ಠರು ಅವಕಾಶ ನೀಡಲಿಲ್ಲ. ಪ್ರವಾಹ ಬಂದಿತ್ತು ಒಬ್ಬನೇ ಹುಚ್ಚನಂತೆ ರಾಜ್ಯವಿಡೀ ತಿರುಗಾಡಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಭಾವುಕರಾಗಿ ಕಣ್ಣೀರು ಹಾಕಿದರು.

10:2126 Jul 2021

ಧರ್ಮೇಂದ್ರ ಪ್ರಧಾನ್‌, ಅರುಣ್‌ ಸಿಂಗ್‌ ವೀಕ್ಷಕರಾಗಿ ಬರುವ ಸಾಧ್ಯತೆ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವೀಕ್ಷಕರಾಗಿ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿ 

09:5126 Jul 2021

ಶಿಕಾರಿಪುರದಲ್ಲಿ ಅಘೋಷಿತ ಬಂದ್‌

ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್‌ ಯಡಿಯೂರಪ್ಪ ಅವರು ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಅವರ ಕ್ಷೇತ್ರ ಶಿಕಾರಿಪುರ ಅಘೋಷಿತ ಬಂದ್‌ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ. 

09:4526 Jul 2021

ಸಂಸದೀಯ ಮಂಡಳಿ ಸಭೆಯಲ್ಲಿ ಮುಂದಿನ ಸಿಎಂ ಕುರಿತು ತೀರ್ಮಾನ: ಅರುಣ್‌ ಸಿಂಗ್‌

ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯದ ಮುಂದಿ‌ನ ಮುಖ್ಯಮಂತ್ರಿ ಕುರಿತು ನಿರ್ಧಾರ ಆಗಲಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

'ಸಂಸದೀಯ ಮಂಡಳಿ ಸಭೆಯ ನಂತರ ಪಕ್ಷದ‌ ವೀಕ್ಷಕರು ಬೆಂಗಳೂರಿಗೆ ತೆರಳಲಿದ್ದಾರೆ. ಶಾಸಕರು ಮತ್ತು ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದ್ದಾರೆ. ನಾನೂ ವೀಕ್ಷಕರೊಂದಿಗೆ ತೆರಳುವೆ' ಎಂದು ಅವರು ತಿಳಿಸಿದರು.

08:4226 Jul 2021

ಸಿಎಂ ಬದಲಾವಣೆಯಿಂದ ರಾಜ್ಯಕ್ಕೆ ಪ್ರಯೋಜನವಿಲ್ಲ: ಸಿದ್ದರಾಮಯ್ಯ

08:1126 Jul 2021

ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜ್ಯದ ನಾಯಕತ್ವ ಬದಲಾವಣೆ ಪ್ರಹಸನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಮೂಲಕ ತೆರೆಬಿದ್ದಿದೆ. ಇದೀಗ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಶುರುವಾಗಿದೆ.