ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಚಿಕ್ಕಮಗಳೂರು: ‘ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ಬಿ.ಎಸ್.ಯಡಿಯೂರಪ್ಪ ಅವರು ಆ ಕುರ್ಚಿಯಲ್ಲಿ ಇದ್ದಾರೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಉತ್ತರಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಅದನ್ನೇ ಹೇಳಿದ್ದಾರೆ. ಹೀಗಾಗಿ, ಆ ವಿಷಯದ ಬಗ್ಗೆ ಮಾತನಾಡುವುದೇ ಅಪ್ರಸ್ತುತ’ ಎಂದು ಪ್ರತಿಕ್ರಿಯಿಸಿದರು.
‘ಸರ್ಕಾರವು ಜನಜೀವನ, ಜೀವ ಉಳಿಸುವಿಕೆ ಇವೆರಡನ್ನು ಸಮತೋಲನದಿಂದ ಪರಿಗಣಿಸುತ್ತಿದೆ. ಕೋವಿಡ್ ದೃಢ ಪ್ರಮಾಣ ಶೇ 5ಕ್ಕಿಂತ ಕಡಿಮೆ ಇರುವ ಕಡೆಗಳಲ್ಲಿ ಹಂತಹಂತವಾಗಿ ಲಾಕ್‌ಡೌನ್ ಸಡಿಲಿಕೆಗೆ ಕ್ರಮ ವಹಿಸುತ್ತೇವೆ. ಪ್ರಮಾಣ ಜಾಸ್ತಿ ಇರುವ ಕಡೆಗಳಲ್ಲಿ ಕಠಿಣ ಕ್ರಮಗಳು ಮುಂದುವರಿಯಲಿವೆ’ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.