ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಥನ್ ಪರಿಮು ಸೇರಿ ಐವರಿಗೆ ‘ಚಿತ್ರಕಲಾ ಸಮ್ಮಾನ್’ ಪ್ರಶಸ್ತಿ

Last Updated 24 ಮಾರ್ಚ್ 2022, 19:45 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ತು ನೀಡುವ ‘ಚಿತ್ರಕಲಾ ಸಮ್ಮಾನ್’ ಪ್ರಶಸ್ತಿಗೆ ಪ್ರೊ. ರಥನ್ ಪರಿಮು ಸೇರಿದಂತೆ ಐವರು ಕಲಾವಿದರು ಆಯ್ಕೆಯಾಗಿದ್ದಾರೆ.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್, ‘₹ 1 ಲಕ್ಷ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿರುವ ‘ಪ್ರೊ.ಎಂ.ಎಸ್. ನಂಜುಂಡರಾವ್ ಪ್ರಶಸ್ತಿಗೆ ಗುಜರಾತಿನ ಪ್ರೊ. ರಥನ್ ಪರಿಮು ಅವರನ್ನು ಆಯ್ಕೆ ಮಾಡಲಾಗಿದೆ.‘ಡಿ.ದೇವರಾಜ ಅರಸು ಪ್ರಶಸ್ತಿ’ಗೆ ಎನ್. ಪುಷ್ಪಮಾಲ,‘ವೈ.ಸುಬ್ರಹ್ಮಣ್ಯರಾಜು ಪ್ರಶಸ್ತಿ’ಗೆ ನರೇಂದ್ರ ವಿ.ಜಿ.,‘ಎಂ.ಆರ್ಯಮೂರ್ತಿ ಪ್ರಶಸ್ತಿ’ಗೆ ಬಸವರಾಜ್ ಮುಸಾವಳಗಿ ಹಾಗೂ‘ಎಚ್.ಕೆ.ಕೇಜ್ರಿವಾಲ್ ಪ್ರಶಸ್ತಿ’ಗೆ ಪ್ರೊ. ವಿಶ್ವಂಭರ ಕೆ.ಎಸ್. ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ ₹ 50 ಸಾವಿರ ಮತ್ತು ಫಲಕಗಳನ್ನು ಒಳಗೊಂಡಿವೆ’ ಎಂದು ತಿಳಿಸಿದರು.

‘ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ 26ರಂದು ಬೆಳಿಗ್ಗೆ 11.30ಕ್ಕೆ ಕುಮಾರಕೃಪಾ ರಸ್ತೆಯಲ್ಲಿರುವ ಪರಿಷತ್ತಿನ ಆವರಣದಲ್ಲಿ ನಡೆಯಲಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಚಿತ್ರಕಲಾ ಪ್ರದರ್ಶನ ವನ್ನು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್ ಉದ್ಘಾಟಿಸಲಿದ್ದಾರೆ.

ಇದೇ 27ರಂದು 19ನೇ ಚಿತ್ರಸಂತೆಯನ್ನು ಕುಮಾರಕೃಪಾ ರಸ್ತೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT