ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಾ ಸಾಧಕರಿಗೆ ‘ಚಿತ್ರಕಲಾ ಸಮ್ಮಾನ್’ ಗೌರವ

Last Updated 26 ಮಾರ್ಚ್ 2022, 15:06 IST
ಅಕ್ಷರ ಗಾತ್ರ

ಬೆಂಗಳೂರು:ಕರ್ನಾಟಕ ಚಿತ್ರಕಲಾ ಪರಿಷತ್ತು ನಗರದಲ್ಲಿ ಶನಿವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿಪ್ರೊ. ರತನ್ ಪರಿಮು ಸೇರಿದಂತೆ ಐವರು ಕಲಾವಿದರಿಗೆ‘ಚಿತ್ರಕಲಾ ಸಮ್ಮಾನ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕಲಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.‘ಪ್ರೊ.ಎಂ.ಎಸ್. ನಂಜುಂಡರಾವ್ ಪ್ರಶಸ್ತಿ’ಯನ್ನು ಗುಜರಾತಿನ ಪ್ರೊ. ರತನ್ ಪರಿಮು ಸ್ವೀಕರಿಸಿದರು. ಈ ಪ್ರಶಸ್ತಿಯು ₹ 1 ಲಕ್ಷ ನಗದು ಬಹುಮಾನ ಹಾಗೂ ಫಲಕ ಒಳಗೊಂಡಿದೆ.

ಎನ್. ಪುಷ್ಪಮಾಲಾ ಅವರಿಗೆ‘ಡಿ.ದೇವರಾಜ ಅರಸು ಪ್ರಶಸ್ತಿ’,ನರೇಂದ್ರ ವಿ.ಜಿ. ಅವರಿಗೆ ‘ವೈ.ಸುಬ್ರಹ್ಮಣ್ಯರಾಜು ಪ್ರಶಸ್ತಿ’,ಬಸವರಾಜ್ ಮುಸಾವಳಗಿ ಅವರಿಗೆ‘ಎಂ.ಆರ್ಯಮೂರ್ತಿ ಪ್ರಶಸ್ತಿ’ ಹಾಗೂಪ್ರೊ. ವಿಶ್ವಂಭರ ಕೆ.ಎಸ್. ಅವರಿಗೆ‘ಎಚ್.ಕೆ.ಕೇಜ್ರಿವಾಲ್ ಪ್ರಶಸ್ತಿ’ ಪ್ರದಾನ ಮಾಡಲಾಯಿತು.ಈ ಪ್ರಶಸ್ತಿಗಳು ತಲಾ ₹ 50 ಸಾವಿರ ಮತ್ತು ಫಲಕಗಳನ್ನು ಒಳಗೊಂಡಿವೆ.

‘ಕರ್ನಾಟಕ ಚಿತ್ರಕಲಾ ಪರಿಷತ್ತು ಗುಣಮಟ್ಟದ ಕಲಾ ಶಿಕ್ಷಣ ನೀಡುತ್ತಿದೆ. ಈ ಕಾರ್ಯಕ್ಕೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು’ ಎಂದು ಎಸ್‌.ಟಿ. ಸೋಮಶೇಖರ್ ಹೇಳಿದರು.

ಭಾನುವಾರ 19ನೇ ಚಿತ್ರಸಂತೆ

ಕರ್ನಾಟಕ ಚಿತ್ರಕಲಾ ಪರಿಷತ್ತು 19ನೇ ಚಿತ್ರಸಂತೆಯನ್ನುಭಾನುವಾರ ಹಮ್ಮಿಕೊಂಡಿದ್ದು,ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಕಲಾ ಜಗತ್ತು ಅನಾವರಣಗೊಳ್ಳಲಿದೆ.ದೇಶದ ವಿವಿಧ ಭಾಗಗಳಿಂದ 1,500 ಕಲಾವಿದರು ಈ ಬಾರಿ ಚಿತ್ರಸಂತೆಯಲ್ಲಿ ಭಾಗವಹಿಸಿ, ಕಲಾಕೃತಿಗಳನ್ನು ಪ್ರದರ್ಶಿಸಲಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಿಗ್ಗೆ 10.30ಕ್ಕೆಚಿತ್ರಸಂತೆಗೆ ಚಾಲನೆ ನೀಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ‘ಕಲಾ ಪ್ರದರ್ಶನ’ ಉದ್ಘಾಟಿಸಲಿದ್ದಾರೆ.

ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಈ ಬಾರಿ ಚಿತ್ರಸಂತೆಯನ್ನು ಸ್ವಾತಂತ್ರ್ಯ ಯೋಧರಿಗೆ ಸಮರ್ಪಿಸಲಾಗಿದೆ. ಪರಿಷತ್ತಿನ 12 ಗ್ಯಾಲರಿಗಳಲ್ಲಿ ಆಯ್ದ ಕಲಾವಿದರ ಕಲಾಕೃತಿಗಳು 10 ದಿನಗಳವರೆಗೆ ಪ್ರದರ್ಶನ ಕಾಣಲಿವೆ.ಚಿತ್ರಸಂತೆಗೆ ಈ ಬಾರಿ 4 ಲಕ್ಷ ಜನ ಭೇಟಿ ನೀಡುವ ನಿರೀಕ್ಷೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT