ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತೇನೆ: ಬೊಮ್ಮಾಯಿ

Last Updated 27 ಜುಲೈ 2021, 16:26 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಪಾಲರನ್ನು ಭೇಟಿಯಾದ ಬಳಿಕ ನಿಯೋಜಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ ಪ್ರತಿಕ್ರಿಯೆ ಇಲ್ಲಿದೆ–

ನನ್ನ ಗುರುಗಳಾದ ಯಡಿಯೂರಪ್ಪ ಅವರ ಆಶಿರ್ವಾದೊಂದಿಗೆ ನಾನು ಶಾಸಕಾಂಗ ಪಕ್ಷದ ನಾಯಕನಾಗಿ ಚುನಾಯಿತನಾಗಿದ್ದೇನೆ. ಯಡಿಯೂರಪ್ಪ ಅವರು 40 ವರ್ಷ ಬಿಜೆಪಿಯನ್ನು ಬೆವರು ಸುರಿಸಿ ಕಟ್ಟಿದ್ದಾರೆ. ಪಕ್ಷಕ್ಕೆ ತನ್ನದೇ ಆದ ಪರಂಪರೆಗಳಳಿವೆ. ಯಡಿಯೂರಪ್ಪ ಅವರ ತ್ಯಾಗಮಯ ನಿರ್ಣಯದಿಂದ ಎರಡು ವರ್ಷ ಕಷ್ಟದ ಪರಿಸ್ಥಿತಿಯಲ್ಲಿ ಎರಡು ಬಾರಿ ಕೋವಿಡ್‌. ಎರಡು ಬಾರಿ ಪ್ರವಾಹ ಎದುರಿಸಿ ರಾಜ್ಯವನ್ನು ಮುನ್ನಡೆಸಿದ್ದಾರೆ. ಹಣಕಾಸಿನ ಕೊರತೆ ಆಗದಂತೆ ಹಣಕಾಸು ನಿರ್ವಹಣೆ ಮಾಡಿದ್ದಾರೆ.

ಯಡಿಯೂರಪ್ಪ ಅವರ ಹೆಜ್ಜೆಯಲ್ಲಿ ಹೆಜ್ಜೆ ಇಟ್ಟು ಬಡವರ, ರೈತರ, ದೀನ ದಲಿತರ, ಹಿಂದುಳಿದ ವರ್ಗದವವರ ಕಲ್ಯಾಣಕ್ಕೆ ಕೆಲಸ ಮಾಡುತ್ತೇನೆ. ಯಡಿಯೂರಪ್ಪ ಅವರ ಕಾರ್ಯಕ್ರಮಗಳನ್ನು ಮುಂದುವರಿಸಿ ಹಣಕಾಸು ನಿರ್ವಹಿಸಿ, ಜನಪರ, ಬಡವರ, ನ್ಯಾಯಪರ ಆಡಳಿತವನ್ನು ಕೊಡಬೇಕು ಎಂಬ ಸಂಕಲ್ಪ ಮಾಡಿದ್ದೇನೆ. ಪ್ರತಿಯೊಂದು ವಿಚಾರದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಡೆಯುತ್ತೇನೆ.

ನನ್ನ ಆಯ್ಕೆಯ ಬಗ್ಗೆ ರಾಜ್ಯಪಾಲರಿಗೆ ತಿಳಿಸಲಾಗಿದೆ. ಅವರು ಸರ್ಕಾರ ರಚಿಸಲು ಆಹ್ವಾನ ಕೊಟ್ಟಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕರಿಸುತ್ತೇನೆ. ನಾನು ಒಬ್ಬನೇ ಪ್ರಮಾಣ ವನಚ ಸ್ವೀಕರಿಸುತ್ತೇನೆ ಎಂದು ಹೇಳಿದರು.

ಇನ್ನಷ್ಟು ಓದು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT