ಶನಿವಾರ, ಜನವರಿ 29, 2022
17 °C

ನಾಳಿನ ಸಂಪುಟ ಸಭೆಯಲ್ಲಿ ಕೋವಿಡ್ ಮಾರ್ಗಸೂಚಿಗಳ ಬಗ್ಗೆ ತೀರ್ಮಾನ; ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಬುಧವಾರ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಕಸ್ಟರ್‌ಗಳಲ್ಲಿ ಕೋವಿಡ್‍ನ ಸ್ಥಿತಿಗತಿ ಹಾಗೂ ನಿರ್ವಹಣೆ, ಓಮೈಕ್ರಾನ್‌‌ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಗಳ ವಿವರ, ವಿವಿಧ ದೇಶಗಳಲ್ಲಿ ಓಮೈಕ್ರಾನ್‌ ತಳಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆಯಲಾಗಿದೆ ಎಂದು ತಿಳಿಸಿದರು.

2022ರ ಮಾರ್ಚ್‍ವರೆಗೆ ಕೋವಿಡ್ ನಿಯಂತ್ರಣಕ್ಕೆ ಬೇಕಾದ ಹಣಕಾಸಿನ ವಿವರಗಳನ್ನು ಪಡೆಯಲಾಗುವುದು. 2 ನೇ ಅಲೆಯಲ್ಲಿ ಬಿಬಿಎಂಪಿ, ಕಂದಾಯ, ವೈದ್ಯಕೀಯ, ಆರೋಗ್ಯ ಇಲಾಖೆಗಳು, ಆಮ್ಲಜನಕದ ಘಟಕಗಳು, ಲ್ಯಾಬ್‍ಗಳು ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳಿಗೆ ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು