ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಉದ್ದೇಶ: ಮುಖ್ಯಮಂತ್ರಿ ಬೊಮ್ಮಾಯಿ

Last Updated 29 ಆಗಸ್ಟ್ 2022, 10:29 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಉದ್ದೇಶ ಸರ್ಕಾರಕ್ಕಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಏಕಲವ್ಯ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಅವರು ಮಾತನಾಡಿದರು.

ಪ್ಯಾರಿಸ್ ಒಲಿಂಪಿಕ್ ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾ ಪಟುಗಳಿಗೆ ವಿಶ್ವ ಮಟ್ಟದ ತರಬೇತಿ ನೀಡಲಾಗುತ್ತಿದೆ ಎಂದರು.

ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ. 2 ರ ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ಮುಂದಿನ ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಂಪಿಕ್ಸ್‍ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರ್ಕಾರದ ಗುರಿಯಾಗಿದೆ. ಗ್ರಾಮೀಣ ಕ್ರೀಡೆಗಳನ್ನು ಸರ್ಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ.

ಕಬ್ಬಡಿ, ಕೋಕೋ, ಕಂಬಳ, ಎತ್ತಿನಗಾಡಿ ಸ್ಪರ್ಧೆ ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಸುತ್ತದೆ. ಗ್ರಾಮಪಂಚಾಯತಿ, ತಾಲ್ಲೂಕು,ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದರು.

ಯುವಜನ ಸಬಲೀಕರಣಕ್ಕಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಬಹಳ ಮುಖ್ಯ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಆಗಸ್ಟ್ 15ಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ಗ್ರಾಮದಲ್ಲಿ 30 ಜನರ ಯುವಜನರ ಸಂಘವನ್ನು ಗುರುತಿಸಿ, ₹7.5 ಲಕ್ಷದಿಂದ ₹10 ಲಕ್ಷದವರೆಗೆ ಯೋಜನೆಗಳನ್ನು ನೀಡಿ, ಸಂಘಕ್ಕೆ ₹1.5 ಲಕ್ಷದ ಅನುದಾನವನ್ನು ಸರ್ಕಾರವೇ ಭರಿಸಿ, ಉತ್ಪನ್ನಗಳ ತಯಾರಿಕೆಗೆ ತರಬೇತಿ, ತಯಾರಿಕೆ ಹಾಗೂ ಮಾರುಕಟ್ಟೆ ಜೋಡಣೆಯನ್ನು ಕಲ್ಪಿಸುವ ಯೋಜನೆಯಾಗಿದೆ.

ಸ್ವಯಂಉದ್ಯೋಗ ಮಾಡಿ ಇತರರಿಗೆ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಿಂದ ಒಂದು ವರ್ಷಕ್ಕೆ ಸುಮಾರು 5 ಲಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಸಿದಂತಾಗುತ್ತದೆ.

ಇದು ವಿನೂತನ ಯೋಜನೆ. ಆರ್ಥಿಕವಾಗಿ, ಸಾಮಾಜಿಕವಾಗಿ ಯುವಕರ ಸಾಮರ್ಥ್ಯ ಹೆಚ್ಚಿಸುವ ಕೆಲಸವನ್ನು ಸರ್ಕಾರ ನಿರಂತರವಾಗಿ ಮಾಡುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT