ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ ಕಾರ್ಯಕರ್ತರ ಮೇಲೆ ಪೊಲೀಸರು ದಾಳಿ ನಡೆಸಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ತಹಶೀಲ್ದಾರರ ಮೂಲಕ ಮುಂಜಾಗ್ರತಾ ಕ್ರಮವಾಗಿ ಪಿಎಫ್‌ಐ ಕಾರ್ಯಕರ್ತರು ವಶಕ್ಕೆ ಎಂದ ಸಿಎಂ
Last Updated 27 ಸೆಪ್ಟೆಂಬರ್ 2022, 10:39 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ (ಪಿಎಫ್‌ಐ) ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿರುವುದು ದಾಳಿಯಲ್ಲ. ತಹಶೀಲ್ದಾರರ ಮೂಲಕ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಸಂಘಟನೆಯ ಬಗ್ಗೆ ಲಭ್ಯವಾಗಿರುವ ಮಾಹಿತಿಯ ಆಧಾರದ ಮೇಲೆ ಕೆಲವು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿತ್ತು. ಪೊಲೀಸರು ಆ ಕೆಲಸ ಮಾಡಿದ್ದಾರೆ. ಈವರೆಗೆ ಎಷ್ಟು ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂಬುದನ್ನು ಪೊಲೀಸರಿಂದ ಮಾಹಿತಿ ಪಡೆಯಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT