ಶುಕ್ರವಾರ, ಮೇ 20, 2022
26 °C

₹3467.62 ಕೋಟಿ ಮುಂಗಡ ತೆರಿಗೆ ಹಂಚಿಕೆ: ಕೇಂದ್ರಕ್ಕೆ ಸಿಎಂ ಬೊಮ್ಮಾಯಿ ಧನ್ಯವಾದ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಮುಂಗಡವಾಗಿ ₹3467.62 ಕೋಟಿ ತೆರಿಗೆ ಹಂಚಿಕೆ ಮಾಡಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

‘ಕೇಂದ್ರ ಸರ್ಕಾರವು ರಾಜ್ಯಕ್ಕೆ ಮುಂಗಡವಾಗಿ ₹3467.62 ಕೋಟಿ ತೆರಿಗೆ ಹಂಚಿಕೆ ಮಾಡಿದೆ. ಈ ಪೈಕಿ, ₹1733.81 ಕೋಟಿ 2022ರ ಜನವರಿಯಲ್ಲಿ ನೀಡಬೇಕಾದ ಕಂತು ಹಾಗೂ ₹1733.81 ಮುಂಗಡ ಕಂತು ಆಗಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದಗಳು’ ಎಂದು ಮುಖ್ಯಮಂತ್ರಿಗಳು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

‘ತೆರಿಗೆ ಹಂಚಿಕೆಯು ಪ್ರಮುಖ ವಲಯಗಳ ವೆಚ್ಚವನ್ನು ಹೆಚ್ಚಿಸಲು ಹಾಗೂ ಕರ್ನಾಟಕದಲ್ಲಿ ಆರ್ಥಿಕ ಬೆಳವಣಿಗೆಗೆ ನೆರವಾಗಲಿದೆ. ವಿಶೇಷವಾಗಿ, ರಾಜ್ಯವು ಕೋವಿಡ್–19 ಮೂರನೇ ಅಲೆಯನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಇದು ಸ್ವಾಗತಾರ್ಹ ಪರಿಹಾರವಾಗಿದೆ’ ಎಂದು ಬೊಮ್ಮಾಯಿ ಉಲ್ಲೇಖಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು