ಶನಿವಾರ, ಮೇ 28, 2022
26 °C

ಸಂಪುಟ ಪುನರ್‌ರಚನೆ ಚರ್ಚೆ ನಡುವೆ ಸಿ.ಎಂ ಬೊಮ್ಮಾಯಿ ಇಂದು ದೆಹಲಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಬೆಳಿಗ್ಗೆ ನವದೆಹಲಿಗೆ ತೆರಳಲಿದ್ದು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ವಿವಿಧ ದೇಶಗಳ ರಾಯಭಾರಿಗಳ ಜತೆ ಸಭೆ ನಡೆಸಲಿದ್ದಾರೆ.

ನವೆಂಬರ್‌ನಲ್ಲಿ ಜಾಗತಿಕ ಹೂಡಿಕೆದಾರರ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿವಿಧ ದೇಶಗಳ ಹೂಡಿಕೆದಾರರನ್ನು ಸೆಳೆಯುವ ಉದ್ದೇಶದಿಂದ ಈ ಸಭೆಯನ್ನು ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.

ಅಲ್ಲದೇ ಇದೇ ಸಂದರ್ಭದಲ್ಲಿ ಅವರು ವಿವಿಧ ಕೇಂದ್ರ ಸಚಿವರ ಭೇಟಿಗಾಗಿ ಸಮಯವನ್ನು ಕೇಳಿದ್ದು, ಸಮಯ ಸಿಕ್ಕರೆ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಅಲ್ಲದೆ ಪಕ್ಷದ ವರಿಷ್ಠರನ್ನೂ ಭೇಟಿ ಮಾಡಲು ಉದ್ದೇಶಿಸಿದ್ದಾರೆ. ಇದಕ್ಕೆ ಅವಕಾಶ ಸಿಕ್ಕಿದರೆ, ಸಂಪುಟ ಪುನರ್‌ರಚನೆ ಬಗ್ಗೆಯೂ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬುಧವಾರ ಅವರು ದೆಹಲಿಯಿಂದ ನಗರಕ್ಕೆ ವಾಪಸ್‌ ಬರಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು