ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ಮತ್ತೆ ಕೋವಿಡ್; ಮಣಿಪಾಲ್ ಆಸ್ಪತ್ರೆಗೆ ದಾಖಲು

Last Updated 22 ಏಪ್ರಿಲ್ 2021, 5:24 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ ಅವರಿಗೆ ಮತ್ತೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ಆಸ್ಪತ್ರೆಗೆದಾಖಲಿಸಲಾಗಿದೆ.

ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯಡಿಯೂರಪ್ಪ ಶುಕ್ರವಾರ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿಕೊಂಡರು. ವರದಿಯಲ್ಲಿ ಕೋವಿಡ್‌ ಪಾಸಿಟಿವ್‌ಬಂದ ಕಾರಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ಹಿಂದೆ ಲಾಕ್‌ಡೌನ್‌ ಸಂದರ್ಭದಲ್ಲೂ ಕೋವಿಡ್‌ ಸೋಂಕಿಗೆ ಒಳಗಾಗಿ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅವರು ಎರಡನೇ ಬಾರಿ ಸೋಂಕಿಗೆ ಒಳಗಾಗಿದ್ದಾರೆ.

ಈ ಬಗ್ಗೆ ಯಡಿಯೂರಪ್ಪ ಅವರ ಟ್ವಿಟರ್ ಖಾತೆಯಲ್ಲಿ ಪ್ರಕಟಿಸಲಾಗಿದ್ದು, 'ಜ್ವರದ ಹಿನ್ನೆಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್‌ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ' ಎಂದಿದ್ದಾರೆ.

ಬೆಳಗಾವಿ ಲೋಕಸಭಾ ಮತ್ತು ಇನ್ನೆರಡು ವಿಧಾನಸಭಾ ಉಪಚುನಾವಣೆಯಪ್ರಚಾರದಲ್ಲಿ ತೊಡಗಿದ್ದ ಅವರು ತೀವ್ರ ಜ್ವರದಿಂದ ಬಳಲಿದ್ದರು. ಬೆಳಗಾವಿಯಲ್ಲಿ ಚುನಾವಣಾ ಪ್ರಚಾರ ಮೊಟಕುಗೊಳಿಸಿ ಗುರುವಾರವೇ ಬೆಂಗಳೂರಿಗೆ ಹಿಂತಿರುತ್ತಿದ್ದರು. ಶುಕ್ರವಾರ ಬೆಳಿಗ್ಗೆ 9.30 ಕ್ಕೆ ಕೋವಿಡ್‌ ಸಂಬಂಧ ತುರ್ತುಸಭೆಯನ್ನು ನಡೆಸಿ ಕೆಲವು ನಿರ್ದೇಶನಗಳನ್ನು ನೀಡಿದರು.

ಕೋವಿಡ್‌ ಪಾಸಿಟಿವ್ ಆಗಿರುವ ಕಾರಣ ಭಾನುವಾರ ಕರೆದಿದ್ದ ಸರ್ವಪಕ್ಷಗಳ ಸಭೆಯನ್ನು ರದ್ದುಪಡಿಸಲಾಗಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಯಡಿಯೂರಪ್ಪ, ‘ಜ್ವರದ ಹಿನ್ನೆಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಪಾಸಿಟಿವ್‌ ಬಂದಿದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ನಲ್ಲಿದ್ದು, ಪರೀಕ್ಷೆ ಮಾಡಿಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಸಂಪರ್ಕದಲ್ಲಿದ್ದ ಮುಖ್ಯಮಂತ್ರಿ ಕಚೇರಿ ಮತ್ತು ನಿವಾಸದ 61 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್‌ ಮಾಡಲು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT