ಶುಕ್ರವಾರ, ಆಗಸ್ಟ್ 12, 2022
20 °C

ವಿಜಯೇಂದ್ರ ಸೂಪರ್‌ ಸಿಎಂ ಅಲ್ಲ: ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ‘ಸೂಪರ್‌ ಸಿಎಂ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪದಲ್ಲಿ ಹುರುಳಿಲ್ಲ. ವಿಜಯೇಂದ್ರ ‘ಸೂಪರ್‌ ಸಿಎಂ’ ಅಲ್ಲ ಎಂದು ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ದೆಹಲಿಯಲ್ಲಿ ಕರ್ನಾಟಕ ಭವನದ ಕಾವೇರಿ ಕಟ್ಟಡದ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಾಗಿದ್ದಾರೆ. ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯ ನಿರ್ವಹಿಸುವ ಕೆಲಸ ಮಾಡುತ್ತಿದ್ದಾರೆಯೇ ಹೊರತು, ರಾಜ್ಯ ಸರ್ಕಾರದ ಯಾವುದೇ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.

ಜಾತ್ಯತೀತ ಜನತಾದಳದ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಮತ್ತು ತಮ್ಮ ಭೇಟಿಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಕುಮಾರಸ್ವಾಮಿ ವಿರೋಧ ಪಕ್ಷದ ಪ್ರಮುಖ ನಾಯಕರು. ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲು ಬಂದಿದ್ದರು. ಆ ಬಗ್ಗೆ ಅನಗತ್ಯ ಊಹಾಪೋಹಗಳು ಬೇಡ’ ಎಂದು ಹೇಳಿದರು.

ನೂತನ ಕಟ್ಟಡದಲ್ಲಿ ಎರಡು ತಳ ಮಹಡಿ, ನೆಲ ಮಹಡಿ ಮತ್ತು ಆರು ಮಹಡಿಗಳು ಸೇರಿ ಒಂಭತ್ತು ಮಹಡಿಗಳು ಇರಲಿವೆ. ಮೆಸರ್ಸ್‌ ಬಾಲಾಜಿ ಕೃಪಾ ಪ್ರಾಜೆಕ್ಟ್ಸ್‌ ಪ್ರೈವೇಟ್‌ ಲಿಮಿಟೆಡ್‌ ಅವರಿಗೆ ನಿರ್ಮಾಣ ಕಾರ್ಯ ವಹಿಸಲಾಗಿದೆ. ಮುಂದಿನ 24 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಯಡಿಯೂರಪ್ಪ ಹೇಳಿದರು.

ಇದನ್ನೂ ಓದಿ... ಹೆಚ್ಚು ನೆರೆ ಪರಿಹಾರ ನೀಡಲು ಪ್ರಧಾನಿ ಮೋದಿಗೆ ಯಡಿಯೂರಪ್ಪ ಒತ್ತಾಯ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು