ಗುರುವಾರ , ಜನವರಿ 28, 2021
27 °C

ಮನೆಗೆ ಮರಳಿದ ಎನ್.ಆರ್.ಸಂತೋಷ್: ಮಾತ್ರೆ ಅದಲು ಬದಲಾಗಿ ಆರೋಗ್ಯದಲ್ಲಿ ಏರುಪೇರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

NR Santhosh

ಬೆಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ಸೋಮವಾರ ಬೆಳಿಗ್ಗೆ ಮನೆಗೆ ಮರಳಿದ್ದಾರೆ.

ಡಾಲರ್ಸ್ ಕಾಲೊನಿಯಲ್ಲಿರುವ ತಮ್ಮ ಮನೆಯಲ್ಲಿ 12 ನಿದ್ರೆ ಮಾತ್ರೆ ಸೇವಿಸಿದ್ದಾರೆ ಎನ್ನಲಾಗಿದ್ದ ಸಂತೋಷ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌

ಇದನ್ನೂ ಓದಿ: ಸಿಎಂ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಆತ್ಮಹತ್ಯೆಗೆ ಯತ್ನ

ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.

ಮಾತ್ರೆ ಅದಲು ಬದಲು: ಆಸ್ಪತ್ರೆಯಿಂದ ಮನೆಗೆ ತೆರಳುವ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಂತೋಷ್, ‘ನಾನು ಆತ್ಮಹತ್ಯೆ ಮಾಡಿಕೊಳ್ಳುವನಲ್ಲ. ಮೂರು ದಿನದ ಹಿಂದೆ ಮದುವೆಯೊಂದಕ್ಕೆ ಹೋಗಿದ್ದೆ. ಅಲ್ಲಿಯ ಊಟದಿಂದ ಆರೋಗ್ಯ ಸಮಸ್ಯೆ ಆಗಿತ್ತು. ಅದಕ್ಕೆ ಸಂಬಂಧಪಟ್ಟ ಮಾತ್ರೆ ಬದಲು ಬೇರೆ ಮಾತ್ರೆ ತೆಗೆದುಕೊಂಡಿದ್ದರಿಂದ ನನ್ನ ಆರೋಗ್ಯದಲ್ಲಿ ಏರುಪೇರು ಆಗಿತ್ತು’ ಎಂದರು.

ಇದನ್ನೂ ಓದಿ: ಪತಿ ಬೇಸರದಿಂದ ಇದ್ದರು: ಸಂತೋಷ್‌ ಪತ್ನಿ ಹೇಳಿಕೆ

‘ನನಗೆ ನಿದ್ರೆಯು ಬರುತ್ತಿರಲಿಲ್ಲ. ಹೀಗಾಗಿ, ಆಗಾಗ ನಿದ್ರೆ ಮಾತ್ರೆ ತೆಗೆದುಕೊಳ್ಳುತ್ತಿದ್ದೆ. ರಾಜಕೀಯದಲ್ಲಿ ಒತ್ತಡ ಇದ್ದಿದ್ದೆ. ಅಷ್ಟಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ನಾನಲ್ಲ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು