ನವದೆಹಲಿ: ತಮ್ಮ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರು ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್. ಬೋಪಣ್ಣ ಹಾಗೂ ವಿ.ರಾಮಸುಬ್ರಮಣಿಯಮ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಇವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಬುಧವಾರ ನಡೆಸಲಿದೆ.

2010–11ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ ನಂತರ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿ ಆ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಮ್ಮಿಂದ ಹಿಂದಕ್ಕೆ ಪಡೆದಿದ್ದಾಗಿ ಉದ್ಯಮಿ ಎ.ಅಲಂ ಪಾಷಾ ಅವರು ಆರೋಪಿಸಿದ್ದರು. ಈ ಸಂಬಂಧ ಅವರು ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಜನವರಿ 5ರಂದು ವಜಾಗೊಳಿಸಿದ್ದ ಹೈಕೋರ್ಟ್, ವಿಚಾರಣೆ ನಡೆಸುವಂತೆಯೂ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.