ಸೋಮವಾರ, ಅಕ್ಟೋಬರ್ 25, 2021
25 °C

ಗುಜರಾತ್‌ನಲ್ಲಿ 80 ದೇವಾಲಯ ಕೆಡವಿದ್ದ ಮೋದಿ: ಕಾಂಗ್ರೆಸ್ ಆರೋಪ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದಾಗ 80 ದೇಗುಲಗಳನ್ನು ಕೆಡವಿದ್ದರು ಎಂದು ಕಾಂಗ್ರೆಸ್‌ ಆರೋಪಿಸಿದೆ. ಈ ಕುರಿತು ಪಕ್ಷದ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ.

‘ಬಿಜೆಪಿ ಆಡಳಿತವೆಂದರೆ ಮನುಷ್ಯರಷ್ಟೇ ಅಲ್ಲ ದೇವರುಗಳೂ ಭಯಪಡುತ್ತಾರೆ! ಬಿಜೆಪಿಗೆ ದೇವಾಲಯಗಳನ್ನು ಕೆಡವಿದ ಇತಿಹಾಸವೇ ಇದೆ. ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ 80 ದೇವಾಲಯಗಳನ್ನು ಕೆಡವಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾಶಿಯಲ್ಲಿ ದೇವಸ್ಥಾನಗಳನ್ನು ಕೆಡವಿ, ಶಿವನ ಪ್ರತಿಮೆ ಎಸೆದಿದ್ದರು. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ದೇಗುಲಗಳನ್ನು ಕೆಡವಲು ಶುರುಮಾಡಿದೆ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಓದಿ: 

ಈ ಮಧ್ಯೆ, ದಲಿತ ಸಿಎಂ ವಿಚಾರವಾಗಿಯೂ ಕರ್ನಾಟಕ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಟ್ವೀಟ್ ಸಮರ ಮುಂದುವರಿದಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು