ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಲಾವಿದರತ್ತ ₹500 ನೋಟುಗಳನ್ನು ಎಸೆಯುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದ್ದು, ಸುದ್ದಿ ಸಂಸ್ಥೆಎಎನ್‌ಐ ವಿಡಿಯೊವನ್ನು ಟ್ವೀಟಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಚುನಾವಣೆ ಗೆಲ್ಲಲು ಬೇಕಾದ ಮತಗಳಿಕೆ ಬೇಕಾದ ಎಲ್ಲ ತಂತ್ರಗಳನ್ನು ಕಾಂಗ್ರೆಸ್ ಬಳಸುತ್ತಿದೆ ಎಂದು ಟೀಕಿಸಿದ್ದಾರೆ. ಈಚುನಾವಣೆಯಲ್ಲಿ ಜನರಿಗೆ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಸಿಎಂ ಬೊಮ್ಮಾಯಿ ಆರೋಪಿಸಿದ ಒಂದು ದಿನದ ನಂತರ ಈ ವಿಡಿಯೊ ಹೊರಬಿದ್ದಿದೆ.
124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್, ಇನ್ನೂ 100 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.