ಶನಿವಾರ, ಮೇ 21, 2022
28 °C

ಸೆಲ್ಫಿ ತೆಗೆದುಕೊಳ್ಳಲು ಬಂದ ವ್ಯಕ್ತಿಗೆ ಬೈದ ಡಿಕೆಶಿ: ವಿಡಿಯೊ ವೈರಲ್‌

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮಂಡ್ಯ: ಮದ್ದೂರಿನಲ್ಲಿ ಮಂಗಳವಾರ ನಡೆದ ಕಾಂಗ್ರೆಸ್‌ ಸಂಸ್ಥಾಪನಾ ದಿನಾಚರಣೆ ವೇಳೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ವ್ಯಕ್ತಿಯೊಬ್ಬರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಬೈಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮದ್ದೂರು ಶಿವಪುರ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸುವ ವೇಳೆ ಘಟನೆ ನಡೆದಿದೆ. ಧ್ವಜಾರೋಹಣ ನೆರವೇರಿಸಲು ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಸೆಲ್ಫಿ ತೆಗೆದುಕೊಳ್ಳು ಮೊಬೈಲ್‌ ಪೋನ್‌ ಮುಂದೆ ಹಿಡಿಯುತ್ತಾರೆ. ತಕ್ಷಣ ಮೊಬೈಲ್‌ ಹಿಡಿದು ತಳ್ಳುವ ಡಿ.ಕೆ.ಶಿವಕುಮಾರ್‌ ಆ ವ್ಯಕ್ತಿಯನ್ನು ಬಯ್ಯುತ್ತಾರೆ.

ಈ ದೃಶ್ಯ ಬುಧವಾರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಚರ್ಚೆಗೆ ಕಾರಣವಾಗಿದೆ. ಜುಲೈ ತಿಂಗಳಲ್ಲಿ ಮಾಜಿ ಸಂಸದ ಜಿ.ಮಾದೇಗೌಡ ಅವರು ಭಾರತೀನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರ ಆರೋಗ್ಯ ವಿಚಾರಿಸಲು ಬಂದಿದ್ದ ಡಿ.ಕೆ.ಶಿವಕುಮಾರ್‌, ತಮ್ಮ ಹೆಗಲ ಮೇಲೆ ಕೈ ಹಾಕಿದ ವ್ಯಕ್ತಿಯೊಬ್ಬರಿಗೆ ಹಲ್ಲೆ ಮಾಡಿದ್ದರು. ಆ ವಿಡಿಯೊ ಕೂಡ ವೈರಲ್‌ ಆಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್‌‘ರಾಜೀವ್‌ ಗಾಂಧಿ ಅವರಿಗೆ ಏನಾಯಿತು ಎಂಬುದು ಗೊತ್ತಿದೆ, ಯಾವ ವ್ಯಕ್ತಿಯ ಕೈಯಲ್ಲಿ ಏನಿರುತ್ತದೆ ಎಂಬುದು ಯಾರಿಗೂ ಗೊತ್ತಿಲ್ಲ. ಕೆಲವು ಸಂದರ್ಭದಲ್ಲಿ ಮನುಷ್ಯನ ಕೋಪ, ಭಾವನೆಗಳು ತಕ್ಷಣ ಹೊರಬರುತ್ತವೆ, ಅದರಲ್ಲಿ ತಪ್ಪೇನೂ ಇಲ್ಲ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು