ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆಗೆ ಕೋವಿಡ್–19 ಸೋಂಕು

Last Updated 19 ಸೆಪ್ಟೆಂಬರ್ 2020, 15:43 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಅವರೇ ಶನಿವಾರ ರಾತ್ರಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.

‘ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನನಗೆ ರೋಗ ಲಕ್ಷಣಗಳಿಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತಿದ್ದೇನೆ. ಸುರಕ್ಷಿತವಾಗಿರಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT