ಮಂಗಳವಾರ, ಅಕ್ಟೋಬರ್ 26, 2021
27 °C

ಸ್ವತಃ ಕೇಂದ್ರ ಸಚಿವರೇ ಕಾರು ಹರಿಸಿ ರೈತರ ಕೊಲೆಗೆ ಯತ್ನಿಸಿದ್ದಾರೆ: ಕಾಂಗ್ರೆಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಕೇಶವ ಪ್ರಸಾದ್‌ ಮೌರ್ಯ ಅವರ ಭೇಟಿಯ ವಿರುದ್ಧ ನಡೆದ ರೈತರ ಪ್ರತಿಭಟನೆ ಸಂದರ್ಭದಲ್ಲಿನ ಹಿಂಸಾಚಾರ ಭುಗಿಲೆದ್ದಿದ್ದು, ಲಖಿಂಪುರದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ. ಇದೇ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, 'ರೈತವಿರೋಧಿ ಕೃಷಿ ಕಾಯ್ದೆಗಳ ವಿರೋಧಿ ಪ್ರತಿಭಟನೆಗೆ 10 ತಿಂಗಳು ಕಳೆದಿವೆ. ಇಷ್ಟು ದಿನಗಳಲ್ಲಿ ಪ್ರತಿಭಟನೆಯನ್ನು ಹತ್ತಿಕ್ಕಲು, ದಿಕ್ಕು ತಪ್ಪಿಸಲು, ಅಪರಾಧಿಗಳನ್ನಾಗಿಸಲು ಬಿಜೆಪಿ ಹಲವು ಕಸರತ್ತು ನಡೆಸಿತ್ತು. ಈಗ ಸ್ವತಃ ಕೇಂದ್ರ ಸಚಿವರೇ ಕಾರು ಹರಿಸಿ ರೈತರನ್ನು ಕೊಲೆ ಮಾಡಲು ಮುಂದಾಗಿದ್ದಾರೆ. ಬಿಜೆಪಿ ಕೊಲೆಗಡುಕರ ಪಕ್ಷ ಎಂದರೆ ತಪ್ಪಾಗದು' ಎಂದಿದೆ.

ಲಖಿಂಪುರ-ಖೇರಿಯಲ್ಲಿ ರೈತರು ಸೇರಿ ಎಂಟು ಮಂದಿ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ತಡರಾತ್ರಿ ಟ್ವೀಟ್ ಮಾಡಿದ್ದ ಕಾಂಗ್ರೆಸ್, ಗಾಂಧಿಯವರ ಭೂಮಿಯಲ್ಲಿ ರೈತರ ರಕ್ತವನ್ನು ಚೆಲ್ಲಲಾಗಿದೆ. ಈ ಕ್ರಿಮಿನಲ್‌ಗಳು ನಮ್ಮ ತಾಯ್ನಾಡಿನ ಶಕ್ತಿಯನ್ನು ನೋಡುವ ಸಮಯ ಬಂದಿದೆ' ಎಂದು ಹೇಳಿತ್ತು.

ಇದನ್ನೂ ಓದಿ: 

ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್‌ ಮಿಶ್ರಾ ಅವರ ಬೆಂಗಾವಲು ಪಡೆಯ ಎರಡು ಎಸ್‌ಯುವಿಗಳು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಹರಿಯಿತು. ಇದರಿಂದ ನಾಲ್ವರು ರೈತರು ಬಲಿಯಾದರು. ಆಕ್ರೋಶಗೊಂಡ ರೈತರು ಎರಡೂ ಎಸ್‌ಯುವಿಗಳನ್ನು ತಡೆದು ನಿಲ್ಲಿಸಿ, ಅವುಗಳಿಗೆ ಬೆಂಕಿ ಹಚ್ಚಿದರು. ಈ ಎಸ್‌ಯುವಿಗಳಲ್ಲಿ ಇದ್ದವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಲಖಿಂಪುರ–ಖೇರಿ ಜಿಲ್ಲಾಧಿಕಾರಿ ಅರವಿಂದ ಕುಮಾರ್‌ ಚೌರಾಸಿಯಾ ತಿಳಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು