ಶನಿವಾರ, ಅಕ್ಟೋಬರ್ 1, 2022
20 °C

ಹೆಣ ಕಂಡರೆ ಓಡೋಡಿ ಬರುವ ಶೋಭಾ ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ?: ಕಾಂಗ್ರೆಸ್

ಪ್ರಜಾವಾಣಿ ವೆಬ್ ಡೆ‌ಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೈತ ವಿರೋಧಿ ಬಿಜೆಪಿ ಸರ್ಕಾರ ರೈತರಿಗೆ ಮೇಲಿಂದ ಮೇಲೆ ಅನ್ಯಾಯವೆಸಗುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಪತ್ರಿಕೆಯೊಂದರ ‘ರೈತರಿಗೂ ಬಡ್ಡಿ ಬರೆ’ ಎಂಬ ವರದಿಯ ತುಣುಕೊಂದನ್ನು ಲಗತ್ತಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

‘ರೈತ ವಿರೋಧಿ ಬಿಜೆಪಿ ಸರ್ಕಾರ ರೈತರಿಗೆ ಮೇಲಿಂದ ಮೇಲೆ ಅನ್ಯಾಯವೆಸಗುತ್ತಿದೆ. ನೆರೆ ಪರಿಹಾರವಿಲ್ಲ, ಗೊಬ್ಬರವೂ ಸಿಗುತ್ತಿಲ್ಲ, ಬೆಳೆ ಸಾಲಕ್ಕೂ ಪರದಾಟ, ಸಾಲದ ಮೇಲಿನ ಬಡ್ಡಿಯೂ ದುಬಾರಿ. ಬಿಜೆಪಿಗೆ ರೈತರ ಮೇಲಿರುವುದು ದ್ವೇಷವೇ, ತಾತ್ಸಾರವೇ? ಹೆಣ ಕಂಡರೆ ಓಡೋಡಿ ಬರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ?’ ಎಂದು ಟ್ವೀಟ್‌ನಲ್ಲಿ ಕಾಂಗ್ರೆಸ್ ಉಲ್ಲೇಖಿಸಿದೆ.

‘ನಿರುದ್ಯೋಗ ಹೋಗಲಾಡಿಸಲು, ಗ್ರಾಮೀಣ ಆರ್ಥಿಕತೆಯನ್ನು ಸಶಕ್ತಗೊಳಿಸಲು ಕಾಂಗ್ರೆಸ್ ಉದ್ಯೋಗ ಖಾತ್ರಿ ಎಂಬ ಕ್ರಾಂತಿಕಾರಿ ಯೋಜನೆ ಜಾರಿಗೊಳಿಸಿತ್ತು. ಕೋವಿಡ್ ಸಂದರ್ಭದಲ್ಲಿ ಜನರ ಸಂಪಾದನೆಯ ಆಸರೆಯಾಗಿದ್ದ ನರೇಗಾವನ್ನು ಬಿಜೆಪಿ ಭ್ರಷ್ಟೋತ್ಸವದಲ್ಲಿ ಲೂಟಿ ಯೋಜನೆಯಾಗಿಸಿದ ಬಿಜೆಪಿ ಸರ್ಕಾರ ಬಡವರ ಉದ್ಯೋಗದ ಆಸರೆಯನ್ನು ಕಿತ್ತುಕೊಂಡಿದೆ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು