ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಒಂದೇ ದಿನ 8,893 ಮಂದಿ ಸೋಂಕಿತರ ಗುಣಮುಖ

Last Updated 17 ಅಕ್ಟೋಬರ್ 2020, 14:15 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ 8,893 ಮಂದಿ ಕೋವಿಡ್‌ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ರಾಜ್ಯದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 7,184 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 71 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,58,574 ಕ್ಕೆ ಏರಿಕೆಯಾಗಿದ್ದು, ಆ ಪೈಕಿ ಇದುವರೆಗೆ 10,427 ಮಂದಿ ಸಾವಿಗೀಡಾಗಿದ್ದಾರೆ.

ಇದುವರೆಗೆ 6,37,481 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 1,10,647 ಸಕ್ರಿಯ ಪ್ರಕರಣಗಳಿದ್ದು, ಆ ಪೈಕಿ 940 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಇಂದು 3,374 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಮೃತಪಟ್ಟಿದ್ದಾರೆ. 4,251 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ ಮೈಸೂರಿನಲ್ಲಿ 501, ಬೆಳಗಾವಿ 298, ತುಮಕೂರು 281, ಬೆಂಗಳೂರು ಗ್ರಾಮಾಂತರ 220, ಹಾಸನ 220, ಉಡುಪಿ 210, ಮಂಡ್ಯ ಜಿಲ್ಲೆಯಲ್ಲಿ 192 ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT