ಮಂಗಳವಾರ, ಮಾರ್ಚ್ 2, 2021
23 °C

ಕೋವಿಡ್‌: 28 ಜಿಲ್ಲೆಗಳಲ್ಲಿ ಶೂನ್ಯ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 708 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿದ್ದು, 28 ಜಿಲ್ಲೆಗಳಲ್ಲಿ ಕೋವಿಡ್‌ನಿಂದ ಯಾವುದೇ ಸಾವು ಸಂಭವಿಸಿಲ್ಲ. 

ಬೆಂಗಳೂರು ನಗರ ಜಿಲ್ಲೆಯಲ್ಲಿ ಇಬ್ಬರು ಮತ್ತು ಕಲಬುರ್ಗಿಯಲ್ಲಿ ಒಬ್ಬರು ಶುಕ್ರವಾರ ಕೋವಿಡ್‌ನಿಂದ ಸಾವಿಗೀಡಾಗುವುದರೊಂದಿಗೆ ಮೃತರ ಸಂಖ್ಯೆ 12,158ಕ್ಕೆ ತಲುಪಿದೆ. ಹೊಸದಾಗಿ 708 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟು 9.30 ಲಕ್ಷ ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 643 ಜನ ಗುಣಮುಖರಾಗಿದ್ದು, ಈವರೆಗೆ 9.09 ಲಕ್ಷ ಮಂದಿ ಕೋವಿಡ್‌ನಿಂದ ಮುಕ್ತರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಪೈಕಿ 8,790 ಮಂದಿ ಮನೆ, ಆರೈಕೆ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ಆರೈಕೆ ಮತ್ತು ಚಿಕಿತ್ಸೆ ಪಡೆಯುತ್ತಿದ್ದಾರೆ. 183 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಹೆಚ್ಚು ಅಂದರೆ, 399 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಉಳಿದ ಎಲ್ಲ ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆ ಒಂದು ಮತ್ತು ಎರಡಂಕಿಯಲ್ಲಿವೆ. ಗದಗ, ರಾಮನಗರ, ಯಾದಗಿರಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿಲ್ಲ.

ಜ.15ರಂದು 84,849 ಮಂದಿ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದು, ಈವರೆಗೆ ಒಟ್ಟಾರೆ 1.57 ಕೋಟಿ ಜನ ಪರೀಕ್ಷೆಗೆ ಒಳಗಾಗಿದ್ದಾರೆ.

14 ಮಂದಿಗೆ ರೂಪಾಂತರ ಸೋಂಕು:

ಇಂಗ್ಲೆಂಡ್‌ನಿಂದ ಬಂದವರ ಪೈಕಿ, 14 ಮಂದಿಗೆ ರೂಪಾಂತರ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ. ಈವರೆಗೆ ಒಟ್ಟಾರೆ, 47 ಮಂದಿ ಕೋವಿಡ್‌ಗೆ ಒಳಗಾಗಿದ್ದು, ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ 26 ಮಂದಿಗೂ ಕೋವಿಡ್ ಪಾಸಿಟಿವ್‌ ವರದಿ ಬಂದಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು