ಶುಕ್ರವಾರ, ಜೂನ್ 25, 2021
21 °C

ಆರ್ಥಿಕ ಪ್ಯಾಕೇಜ್ ಕೊಡಲೇಬೇಕು: ಡಿ.ಕೆ. ಶಿವಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವವರಿಗೆ ರಾಜ್ಯ ಸರ್ಕಾರ ಆರ್ಥಿಕ ಪ್ಯಾಕೇಜ್ ಕೊಡಲೇಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಗೊಬ್ಬರದ ಬೆಲೆ ಗಗನಕ್ಕೇರಿದೆ. ಹೂ, ಹಣ್ಣು, ತರಕಾರಿ ಬೆಳೆಗಾರರು ಬೆಳೆ ಉಳಿಸಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಬೇಕು’ ಎಂದು ಒತ್ತಾಯಿಸಿದರು. ‘ಲಸಿಕೆ ನೀಡುವುದು ಕೇಂದ್ರದ ಕೆಲಸ. ರಾಜ್ಯ ಸರ್ಕಾರ ಜಾಗತಿಕ ಟೆಂಡರ್ ಕರೆಯುವುದು ಏಕೆ. ಇದರಲ್ಲೂ ಕಮಿಷನ್ ಹೊಡೆಯಲು ಮುಂದಾಗಿದ್ದಾರೆ. ಲಸಿಕೆ ವಿಚಾರದಲ್ಲಿ ಆರೋಗ್ಯ ಸಚಿವರಿಗೂ, ಉಪಮುಖ್ಯಮಂತ್ರಿಗೂ ಸಮನ್ವಯತೆ ಇಲ್ಲ’ ಎಂದರು.

‘ಪಕ್ಷದ ಶಾಸಕರ, ಸಂಸದರ ನಿಧಿಯಿಂದ ₹ 100 ಕೋಟಿಯನ್ನು ಲಸಿಕಾ ಕಾರ್ಯಕ್ರಮಕ್ಕೆ ಬಳಸಲು ಸರ್ಕಾರ ಅನುಮತಿ ನೀಡಲಿ. ಲಸಿಕೆ ಹೇಗೆ ವಿತರಿಸಬೇಕು ಎಂಬುದನ್ನು ನಾವು ತೋರಿಸುತ್ತೇವೆ. ಸರ್ಕಾರದಲ್ಲಿ ಜಗಳ, ಯುದ್ಧ ನಡೆಯುತ್ತಿದ್ದು, ಅಧಿಕಾರಿಗಳು ಬರೆದುಕೊಟ್ಟಿದ್ದನ್ನು ಮುಖ್ಯಮಂತ್ರಿ ಓದುತ್ತಿದ್ದಾರೆ. ರಾಜ್ಯದ ನಾಯಕತ್ವದ ಬಗ್ಗೆ ಪ್ರಧಾನಿಗೆ ನಂಬಿಕೆ ಇಲ್ಲ. ನಂಬಿಕೆ ಇದ್ದಿದ್ದರೆ, ಅವರು ಜಿಲ್ಲಾಧಿಕಾರಿಗಳ ಸಭೆ ಯಾಕೆ ಮಾಡುತ್ತಿದ್ದರು’ ಎಂದೂ ಪ್ರಶ್ನಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು