ಶುಕ್ರವಾರ, ಜೂನ್ 18, 2021
28 °C

ರಾಜ್ಯದಲ್ಲಿ ಲಾಕ್‌ಡೌನ್ ವಿಸ್ತರಣೆ: ಇಂದು ತೀರ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಲಾಕ್‌ಡೌನ್ ವಿಸ್ತರಿಸುವ ಮತ್ತು ಸಂಕಷ್ಟದಲ್ಲಿರುವವರಿಗೆ ವಿಶೇಷ ಆರ್ಥಿಕ ಪ್ಯಾಕೇಜ್‌ ನೀಡುವ ಬಗ್ಗೆ ಬುಧವಾರ ಬೆಳಿಗ್ಗೆ ನಡೆಯುವ ಸಚಿವರ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕೋವಿಡ್‌ ಸ್ಥಿತಿಗತಿಯ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದು, ಅಲ್ಲಿ ತೀರ್ಮಾನ ಪ್ರಕಟಿಸಬಹುದು ಎಂದು ಮೂಲಗಳು ತಿಳಿಸಿವೆ.

ಲಾಕ್‌ಡೌನ್‌ ಇದೇ 24 ಕ್ಕೆ ಕೊನೆಗೊಳ್ಳಲಿದೆ. ಆದರೆ, ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಕಡಿಮೆ ಆಗದಿರುವ ಕಾರಣ ಲಾಕ್‌ಡೌನ್‌ ಮುಂದುವರಿಸಬೇಕು ಎಂಬ ಒತ್ತಡ ಹೆಚ್ಚಾಗಿದೆ. ಬಹುತೇಕ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ ತಿಂಗಳ ಕೊನೆಯವರೆಗೆ ಲಾಕ್‌ಡೌನ್‌ ಮುಂದುವರಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿ ಇರುವವರಿಗಾಗಿ ಆರ್ಥಿಕ ಪ್ಯಾಕೇಜ್‌ ನೀಡಲು ಚಿಂತನೆ ನಡೆದಿದ್ದು, ನಾಳೆ ಈ ಬಗ್ಗೆ ತೀರ್ಮಾನ ತೆಗೆದುಕೊಂಡು, ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ಬಳಿಕ ಜಾರಿ ಮಾಡಬಹುದು. ಸಂಕಷ್ಟದಲ್ಲಿರುವವರಿಗೆ ಪ್ಯಾಕೇಜ್‌ ನೀಡಬೇಕು ಎಂದು ವಿರೋಧ ಪಕ್ಷಗಳೂ ಒತ್ತಾಯಿಸಿವೆ.

ಕಳೆದ ಬಾರಿಯಂತೆ ಪ್ಯಾಕೇಜ್‌ ಪ್ರಕಟಿಸುವ ಸಾಧ್ಯತೆ ಇಲ್ಲ. ತೀರಾ ಸಂಕಷ್ಟದಲ್ಲಿ ಇದ್ದವರಿಗೆ ಸೀಮಿತವಾಗಿ ಆರ್ಥಿಕ ನೆರವಿನ ಪ್ಯಾಕೇಜ್‌ ನೀಡಬಹುದು ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು