ಗುರುವಾರ , ಆಗಸ್ಟ್ 11, 2022
27 °C

Karnataka Covid-19 Update: ರಾಜ್ಯದಲ್ಲಿ 1,185 ಹೊಸ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,185 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು 9,03,425 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 11,965ಕ್ಕೆ ತಲುಪಿದೆ. ಮಂಗಳವಾರ ಗುಣಮುಖರಾದ 1,594 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 8,75,796 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 15,645 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 253 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಲ್ಲಿ 10 ಸಾವಿರ ಸಕ್ರಿಯ ಪ್ರಕರಣ
ಬೆಂಗಳೂರಿನಲ್ಲಿ ಇಂದು 673 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ನಗರಲ್ಲಿ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 3,79,571 ಆಗಿದೆ. ಇದರಲ್ಲಿ 3,64,787 ಸೋಂಕಿತರು ಗುಣಮುಖರಾಗಿದ್ದು, 4,241 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಇನ್ನೂ 10,542 ಸಕ್ರಿಯ ಪ್ರಕರಣಗಳು ಇವೆ.

ಉಳಿದಂತೆ ಇಂದು ಚಿಕ್ಕಬಳ್ಳಾಪುರದಲ್ಲಿ 56, ತುಮಕೂರಿನಲ್ಲಿ 44, ದಕ್ಷಿಣ ಕನ್ನಡದಲ್ಲಿ 38, ಮೈಸೂರಿನಲ್ಲಿ 35, ಹಾಸನದಲ್ಲಿ 27, ಕೋಲಾರದಲ್ಲಿ 26, , ಬೆಳಗಾವಿಯಲ್ಲಿ 25 ಪ್ರಕರಣಗಳು ದಾಖಲಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು