Karnataka Covid-19 Update: ಸೋಂಕಿತರ ಸಂಖ್ಯೆ 9.05 ಲಕ್ಷಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಗುರುವಾರ 1,236 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇಲ್ಲಿಯವರೆಗೆ ಸೋಂಕಿಗೀಡಾದವರ ಒಟ್ಟು ಸಂಖ್ಯೆ 9.05 ಲಕ್ಷ ದಾಟಿದೆ.
ಈ ತಿಂಗಳು 17 ದಿನಗಳ ಅವಧಿಯಲ್ಲಿ 21,004 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 1,235 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಲ್ಲಿ 10 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಕೋವಿಡ್‌ಗೆ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 11,981ಕ್ಕೆ ತಲುಪಿದೆ. ಒಂದೇ ದಿನ 92 ಸಾವಿರ ಆರ್‌ಟಿ–ಪಿಸಿಆರ್ ಸೇರಿದಂತೆ 1.06 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ. ಈವರೆಗೆ 1.27 ಕೋಟಿ ಮಂದಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.
ಕೋವಿಡ್ ಪೀಡಿತರಲ್ಲಿ 1,497 ಮಂದಿಗೆ ಕಾಯಿಲೆ ವಾಸಿಯಾಗಿದ್ದು, ಇದರಿಂದಾಗಿ ಚೇತರಿಸಿಕೊಂಡವರ ಸಂಖ್ಯೆ 8.78 ಲಕ್ಷಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದ್ದು, ಸದ್ಯ 15,205 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 229 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ.
ಬೆಂಗಳೂರಿನಲ್ಲಿ 689 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.80 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 54 ಪ್ರಕರಣಗಳು ವರದಿಯಾಗಿದೆ. ಅಲ್ಲಿ ಸೋಂಕಿತರ ಸಂಖ್ಯೆ 51,605ಕ್ಕೆ ತಲುಪಿದೆ. ತುಮಕೂರಿನಲ್ಲಿ 57, ದಕ್ಷಿಣ ಕನ್ನಡದಲ್ಲಿ 40, ಶಿವಮೊಗ್ಗದಲ್ಲಿ 32, ಮಂಡ್ಯದಲ್ಲಿ 31, ಕೋಲಾರದಲ್ಲಿ 29 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದ 26 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿಲ್ಲ.
ಇಂದಿನ 17/12/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@DKShivakumar @Tejasvi_Surya @BYVijayendra @Ramesh_aravind @PuneethRajkumar @CovidIndiaSeva @iaspankajpandey @KarnatakaVarthe @PIBBengaluru @kiranshaw @WFRisinghttps://t.co/VEFdV2JtU6 pic.twitter.com/mTfX9oXC8e
— K'taka Health Dept (@DHFWKA) December 17, 2020
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.