Karnataka Covid-19 Update: ಒಂದೇ ದಿನ 1,240 ಹೊಸ ಪ್ರಕರಣ, 6 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19 ದೃಢಪಟ್ಟ 1,240 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 06 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟು 9,046,655 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 11,971ಕ್ಕೆ ತಲುಪಿದೆ. ಬುಧವಾರ ಗುಣಮುಖರಾದ 1,403 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 877199 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 15,476 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 248 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಲ್ಲಿ 676, ಹಾಸನದಲ್ಲಿ 84, ತುಮಕೂರಿನಲ್ಲಿ 57, ಚಿತ್ರದುರ್ಗದಲ್ಲಿ 51 ಹೊಸ ಪ್ರಕರಣಗಳು ದಾಖಲಾಗಿವೆ. ಕಳೆದ 24 ಗಂಟೆಯಲ್ಲಿ ಒಟ್ಟು 1.57 ಲಕ್ಷ ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು.
ಇಂದಿನ 16/12/2020 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.@DKShivakumar @Tejasvi_Surya @BYVijayendra @Ramesh_aravind @PuneethRajkumar @CovidIndiaSeva @iaspankajpandey @KarnatakaVarthe @PIBBengaluru @kiranshaw @WFRisinghttps://t.co/668RP7TehC pic.twitter.com/rh2ukY2NAG
— K'taka Health Dept (@DHFWKA) December 16, 2020
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.