ಬುಧವಾರ, ಜೂನ್ 29, 2022
26 °C

Karnataka Covid-19 Update: 33,337 ಪ್ರಕರಣ ದೃಢ, 70 ಮಂದಿ ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆ ಅವಧಿಯಲ್ಲಿ 33,337 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 70 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಕಟಣೆ ತಿಳಿಸಿದೆ.

69,902 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 2,52,132 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಈವರೆಗೆ 37,57,031 ಮಂದಿ ಸೋಂಕಿತರಾಗಿದ್ದು 38,874 ಸೋಂಕಿತರು ಮೃತಪಟ್ಟಿದ್ದಾರೆ. 34,65,995 ಸೋಂಕಿತರು ಗುಣಮುಖರಾಗಿದ್ದಾರೆ. ದೈನಂದಿನ ಪ್ರಕರಣದಲ್ಲಿ ಶುಕ್ರವಾರಕ್ಕಿಂತ ಇಂದು (ಶನಿವಾರ) ತುಸು ಹೆಚ್ಚಳ ಕಂಡುಬಂದಿದೆ.

ಬೆಂಗಳೂರಿನಲ್ಲಿ 16,586 ಪ್ರಕರಣಗಳು ದೃಢಪಟ್ಟಿದ್ದು, 13 ಮಂದಿ ಮೃತಪಟ್ಟಿದ್ದಾರೆ.

ಈ ಮಧ್ಯೆ, ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ರಾಜ್ಯದಲ್ಲಿ ಜನವರಿ 28ಕ್ಕೆ ಶೇ 1.90ರಷ್ಟಿತ್ತು. 2.88 ಲಕ್ಷ ಕೋವಿಡ್ ಪ್ರಕರಣಗಳ ಪೈಕಿ 5,477 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು