ಸೋಮವಾರ, ಅಕ್ಟೋಬರ್ 18, 2021
26 °C

Karnataka Covid-19 Update: ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರುಮುಖವಾಗಿದೆ. ಸೋಮವಾರ ಹೊಸದಾಗಿ 818 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಈವರೆಗೆ 29.69 ಲಕ್ಷ ಜನ ಸೋಂಕಿಗೊಳಪಟ್ಟಂತಾಗಿದೆ. ಸೋಂಕು ದೃಢ ಪ್ರಮಾಣವೂ ಶೇ 0.80ಕ್ಕೆ ಹೆಚ್ಚಿದೆ.

ಒಂದು ದಿನದಲ್ಲಿ 21 ಮಂದಿ ಸಾವಿಗೀಡಾಗಿದ್ದಾರೆ. ಮರಣ ಪ್ರಮಾಣ ದರವು ಶೇ 2.56ಕ್ಕೆ ತಗ್ಗಿದೆ. ರಾಜ್ಯದಲ್ಲಿ ಕೋವಿಡ್‌ ಕಾಣಿಸಿಕೊಂಡ ದಿನದಿಂದ ಈವರೆಗೆ ಒಟ್ಟು 37,648 ಜನ ಅಸುನೀಗಿದ್ದಾರೆ. 

1,414 ಜನರಿಗೆ ಕಾಯಿಲೆ ವಾಸಿಯಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 29.17 ಲಕ್ಷಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಸದ್ಯ 13,741 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಏರಿದೆ. ಹಿಂದಿನ 24 ಗಂಟೆಗಳಲ್ಲಿ 359 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಕೇರಳದ ಗಡಿ ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ (114) ಮತ್ತು ಮೈಸೂರಿನಲ್ಲೂ (71) ಹೊಸ ಪ್ರಕರಣಗಳು ಹೆಚ್ಚಿವೆ. ಕೊಡಗು ಹಾಗೂ ಉಡುಪಿಯಲ್ಲಿ ಕ್ರಮವಾಗಿ 25 ಹಾಗೂ 73 ಪ್ರಕರಣಗಳು ವರದಿಯಾಗಿವೆ. ಬಾಗಲಕೋಟೆ, ಬೀದರ್‌, ಹಾವೇರಿ, ಕೊಪ್ಪಳ, ರಾಯಚೂರು, ರಾಮನಗರ ಮತ್ತು ಯಾದಗಿರಿಯಲ್ಲಿ ಹೊಸ ಪ್ರಕರಣಗಳು ದಾಖಲಾಗಿಲ್ಲ. ಉಳಿದ ಜಿಲ್ಲೆಗಳಲ್ಲಿ ಇದು 30ಕ್ಕಿಂತ ಕಡಿಮೆ ಇದೆ. 

ಕೋವಿಡ್ ಪೀಡಿತರ ಪೈಕಿ ಬೆಂಗಳೂರಿನಲ್ಲಿ 8 ಮಂದಿ ಅಸುನೀಗಿದ್ದಾರೆ. ಬೆಳಗಾವಿಯಲ್ಲಿ 3, ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಪ್ಪಳ, ರಾಮನಗರ, ಶಿವಮೊಗ್ಗ ಮತ್ತು ಉಡುಪಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.

ಕೋವಿಡ್‌ ಪರೀಕ್ಷೆಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಸೋಮವಾರ 1.01 ಲಕ್ಷ ಮಾದರಿಗಳನ್ನಷ್ಟೇ ಪರೀಕ್ಷಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು