ಶನಿವಾರ, ಅಕ್ಟೋಬರ್ 16, 2021
22 °C

Karnataka Covid-19 Update: 406 ಹೊಸ ಪ್ರಕರಣ ದೃಢ, 10 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ಹೊಸದಾಗಿ 406 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.‌

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,81,027ಕ್ಕೆ ಏರಿಕೆಯಾಗಿದೆ. ಆ ಪೈಕಿ 37,885 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 29,32,959 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 10,154 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.35 ರಷ್ಟಿದ್ದು, ಮರಣ ಪ್ರಮಾಣ ಶೇ 2.46 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.‌

ಇದನ್ನೂ ಓದಿ: ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ರಾಜಧಾನಿ ಬೆಂಗಳೂರು (156) ಹೊರತು ಪಡಿಸಿ ಬೇರೆ ಜಿಲ್ಲೆಗಳಲ್ಲಿ ನೂರಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿಲ್ಲ. ಹಾಗೆಯೇ, ಬೀದರ್‌, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಯಲ್ಲಿ ಒಂದೂ ಪ್ರಕರಣಗಳು ವರದಿಯಾಗಿಲ್ಲ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು