ಬೆಂಗಳೂರು: ರಾಜ್ಯದಾದ್ಯಂತ ಒಂದು ದಿನದ ಅವಧಿಯಲ್ಲಿ 371 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 7 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಗದಗ ಜಿಲ್ಲೆಯು ಕೋವಿಡ್ ಮುಕ್ತವಾಗಿದೆ. ಜಿಲ್ಲೆಯಲ್ಲಿ ಒಂದೂ ಹೊಸ ಕೋವಿಡ್ ಪ್ರಕರಣ ವರದಿಯಾಗಿಲ್ಲ. ಸಕ್ರಿಯ ಪ್ರಕರಣಗಳೂ ಇಲ್ಲ.

ರಾಜ್ಯದಾದ್ಯಂತ ಕೋವಿಡ್‌ನಿಂದಾಗಿ ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38 ಸಾವಿರ ದಾಟಿದೆ.

6 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 17 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಹಾಗೂ ವಿಜಯಪುರದಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.

ಓದಿ:ಕೋವಿಡ್: ರಷ್ಯಾದಲ್ಲಿ ಸತತ ಐದನೇ ದಿನ ಸಾವಿರಕ್ಕೂ ಹೆಚ್ಚು ಸಾವು!

ಬೆಂಗಳೂರಿನಲ್ಲಿ 193 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 50ರ ಗಡಿಯೊಳಗೆ ಇವೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 29.85 ಲಕ್ಷ ದಾಟಿದೆ.

ಸೋಂಕಿತರಲ್ಲಿ 342 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.38 ಲಕ್ಷ ದಾಟಿದೆ. 4 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ನಾಲ್ವರು, ದಕ್ಷಿಣ ಕನ್ನಡ, ಕೋಲಾರ ಹಾಗೂ ತುಮಕೂರಿನಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ. ಮರಣ ಪ್ರಮಾಣ ದರವು ಶೇ 1.88 ರಷ್ಟು ದೃಢಪಟ್ಟಿದೆ.

ಕೋವಿಡ್ ಸಕ್ರಿಯ ಪ್ರಕರಣಗಳು 20 ಜಿಲ್ಲೆಗಳಲ್ಲಿ 100ಕ್ಕಿಂತ ಕಡಿಮೆ ಇದೆ. 8,914 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಬಾಗಲಕೋಟೆ ಸೇರಿದಂತೆ 6 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಹತ್ತರೊಳಗೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ (6,754) ಸಕ್ರಿಯ ಪ್ರಕರಣಗಳಿವೆ.

ಕಳೆದ ವರ್ಷ ಮಾ.10ರಂದು ಮೊದಲ ಮರಣ ಪ್ರಕರಣ ವರದಿಯಾಗಿತ್ತು. ಡಿಸೆಂಬರ್ ಅಂತ್ಯಕ್ಕೆ ಮೃತರ ಸಂಖ್ಯೆ 12,090ಕ್ಕೆ ತಲುಪಿತ್ತು. ಎರಡನೇ ಅಲೆಯಲ್ಲಿ ಸೋಂಕಿತರ ಜತೆಗೆ ಕಾಯಿಲೆಯ ತೀವ್ರತೆಗೆ ಮೃತಪಡುವವರ ಸಂಖ್ಯೆಯೂ ಹೆಚ್ಚಳವಾಗಿತ್ತು. ಹೀಗಾಗಿ, ಈ ವರ್ಷ 25,912 ಮಂದಿ ಈವರೆಗೆ ಸಾವಿಗೀಡಾಗಿದ್ದಾರೆ.

ಓದಿ:ಜರ್ಮನಿಯಲ್ಲೂ ಕೋವಿಡ್ ಪ್ರಮಾಣ ಹೆಚ್ಚಳ

ಒಂದು ದಿನದ ಅವಧಿಯಲ್ಲಿ 1.20 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. 371 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣವು ಶೇ 0.30 ರಷ್ಟು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.