ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid-19 Update: 1,037 ಹೊಸ ಪ್ರಕರಣ ವರದಿ, ಬೆಂಗಳೂರಲ್ಲೇ 932 ಕೇಸ್

ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್–19 ದೃಢಪಟ್ಟ 1,037 ಹೊಸ ಪ್ರಕರಣಗಳು ಶುಕ್ರವಾರ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.‌

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 39,77,090ಕ್ಕೆ ಏರಿಕೆಯಾಗಿದೆ. ಆ ಪೈಕಿ ಇಂದು ಮೃತಪಟ್ಟ ಒಬ್ಬರೂ ಸೇರಿದಂತೆ ಒಟ್ಟು 40,081 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ39,30,461 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ6,506 ಸಕ್ರಿಯ ಪ್ರಕರಣಗಳಿವೆ.

ದೈನಂದಿನ ಕೋವಿಡ್‌ ದೃಢ ಪ್ರಮಾಣಶೇ4.24 ರಷ್ಟಿದ್ದು, ವಾರದ ದರ ಶೇ 3.84 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.‌

ರಾಜಧಾನಿ ಬೆಂಗಳೂರಿನಲ್ಲೇ932 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ಧಾರವಾಡ (19), ಮೈಸೂರು (16) ಹಾಗೂ ದಕ್ಷಿಣ ಕನ್ನಡದಲ್ಲಿ (15) ಮಾತ್ರ ಹತ್ತಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಏಳು ಜಿಲ್ಲೆಗಳಲ್ಲಿ ಒಂದೂ ಪ್ರಕರಣ ಬೆಳಕಿಗೆ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT