Karnataka Covid-19 Update: ರಾಜ್ಯದಲ್ಲಿ 300 ಪ್ರಕರಣ ದೃಢ, ಒಬ್ಬ ಸೋಂಕಿತ ಸಾವು

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳಲ್ಲಿ 300 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ಸೋಂಕಿತ ಮೃತಪಟ್ಟಿದ್ದಾರೆ.
279 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಈವರೆಗೆ 30,02,427 ಮಂದಿ ಸೋಂಕಿತರಾಗಿದ್ದು, 38,288 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 29,56,970 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 7,140 ಸಕ್ರಿಯ ಪ್ರಕರಣಗಳಿವೆ.
ಇದನ್ನೂ ಓದಿ: ದೆಹಲಿಯಲ್ಲಿ 6 ತಿಂಗಳಲ್ಲೇ ಅಧಿಕ ಪ್ರಕರಣ; ದೇಶದ 145 ಜನರಲ್ಲಿ ಓಮೈಕ್ರಾನ್ ಸೋಂಕು
ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 168 ಪ್ರಕರಣಗಳು ವರದಿಯಾಗಿವೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 37, ಮೈಸೂರಿನಲ್ಲಿ 13, ಹಾಸನದಲ್ಲಿ 11 ಪ್ರಕರಣಗಳು ದೃಢಪಟ್ಟಿವೆ.
ಇಂದಿನ 19/12/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/qj7KcxQ4ee@CMofKarnataka @BSBommai @mla_sudhakar @Comm_dhfwka @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/BrVXlS37CM
— K'taka Health Dept (@DHFWKA) December 19, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.